राष्ट्रीय

Blog single photo

ರಾಹುಲ್ ಅವರು ಅಧ್ಯಕ್ಷ ಗಾದಿ ತೊರೆದಿರುವುದು ಪಕ್ಷಕ್ಕೆ ದೊಡ್ಡ ಪೆಟ್ಟು - ಸಲ್ಮಾನ್ ಖುರ್ಷಿದ್

09/10/2019


ನವದೆಹಲಿ, ಅ.09 (ಹಿ.ಸ) - 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷಿತ ಸ್ಥಾನ ಪಡೆಯದಿದ್ದ ಕಾರಣ ಭಾರೀ ಅವಮಾನ ಎದುರಿಸಿದ ಬಳಿಕ ರಾಹುಲ್ ಗಾಂಧಿ ಪಕ್ಷದ ಚುಕ್ಕಾಣಿ ಹಿಡಿಯದೇ ದೂರವೇ ಉಳಿದಿದ್ದರಿಂದ ಕಾಂಗ್ರೆಸ್  ಮತ್ತಷ್ಟು ಸಮಸ್ಯೆ ಅನುಭವಿಸುವಂತಾಗಿದೆ ಎಂದು ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪಕ್ಷದ ಸೋಲಿಗೆ ಏನು ಕಾರಣ ಎಂಬುದನ್ನು ಕಂಡು ಹಿಡಿಯಬೇಕು. ಪಕ್ಷದ ಅಧ್ಯಕ್ಷ ಸ್ಥಾನ ತೊರೆಯದಂತೆ ತಾವು ಅವರಲ್ಲಿ ಮನವಿ ಮಾಡಿಕೊಂಡಿದ್ದೇವು. ಆದರೂ ರಾಹುಲ್ ಅಧ್ಯಕ್ಷಗಾದಿಯಿಂದ ಕೆಳಗಿಳಿದಿದ್ದಾರೆ. ಅವರೇ ಪಕ್ಷದ ಅಧ್ಯಕ್ಷರಾಗಿ ಮುಂದುವರಿಯಬೇಕೆಂಬುದು ನಮ್ಮ ಆಶಯವಾಗಿತ್ತು. ಆದರೆ, ಅವರ ನಿರ್ಧಾರವನ್ನು ನಾವು ಗೌರವಿಸಬೇಕಾಗಿದೆ ಎಂದು ಹೇಳಿದರು. ಪಕ್ಷದೊಳಗಿನ ಬಿಕ್ಕಟ್ಟು, ಅಸಮಾಧಾನಗಳು ಮುಂಬರುವ ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಅಡ್ಡಿಯಾಗಲಿದೆ ಎಂದು ಖುರ್ಷಿದ್ ವಿಶ್ಲೇಷಿಸಿದ್ದಾರೆ. ಪಕ್ಷದೊಳಗಿನ ಆಂತರಿಕ ಕಚ್ಚಾಟ ಮಿತಿ ಮೀರಿದೆ. ಹೀಗೆಯೇ ಪರಿಸ್ಥಿತಿ ಮುಂದುವರಿದರೆ ಭವಿಷ್ಯದಲ್ಲಿ ಪಕ್ಷಕ್ಕೆ ಮಾರಕವಾಗಲಿದೆ ಎಂದು ಹೇಳಿದ್ದಾರೆ. 


 
Top