भारत

Blog single photo

ಪಶ್ಚಿಮ ಬಂಗಾಳದಲ್ಲಿ ನಾಳೆಯಿಂದ 2 ವಾರ ಲಾಕ್ ಡೌನ್

15/05/2021

ಕೋಲ್ಕತ್ತಾ , ಮೇ 15 : ಪಶ್ಚಿಮ ಬಂಗಾಳದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಕೈಮೀರಿದ್ದು ಸಾವಿನ ಸಂಖ್ಯೆಯೂ ಅಧಿಕವಾಗುತ್ತಿದೆ. ಹೀಗಾಗಿ ಕೊರೋನಾ ನಿಯಂತ್ರಣಕ್ಕೆ ಮುಂದಾಗಿರುವ  ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಾಳೆಯಿಂದ ಪಶ್ಚಿಮ ಬಂಗಾಳದಲ್ಲಿ 2 ವಾರಗಳ ಸಂಪೂರ್ಣ ಲಾಕ್​ಡೌನ್ ಘೋಷಣೆ ಮಾಡಿ ಆದೇಶಿಸಿದೆ. 

ಈ ಅವಧಿಯಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಡುತ್ತವೆ, ಕೋಲ್ಕತಾ ಮೆಟ್ರೋ ಸೇರಿದಂತೆ ಸಾರಿಗೆ ಸೇವೆಗಳು ಕೂಡ ಸ್ತಬ್ಧಗೊಳ್ಳಲಿದೆ . ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ರಾಜ್ಯದ ಅಧಿಸೂಚನೆ ತಿಳಿಸಿದೆ. 

ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ದಿನಸಿ ಅಂಗಡಿಗಳು ಬೆಳಿಗ್ಗೆ 7 ರಿಂದ 10 ರವರೆಗೆ ತೆರೆದಿರುತ್ತವೆ ಎಂದು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯ ಮಾಹಿತಿ ನೀಡಿದ್ದಾರೆ.


 
Top