क्षेत्रीय

Blog single photo

ಬಿಜೆಪಿ ಅಭ್ಯರ್ಥಿ ಸುಧಾಕರ್ ಪರ ತೆಲುಗು ಹಾಸ್ಯ ನಟ ಬ್ರಹ್ಮಾನಂದಂ ಮತಯಾಚನೆ

30/11/2019


ಚಿಕ್ಕಬಳ್ಳಾಪುರ, ನ.30 (ಹಿ.ಸ) -  ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪರ ಖ್ಯಾತ ತೆಲುಗು ಹಾಸ್ಯ ನಟ ಬ್ರಹ್ಮಾನಂದಂ ಅವರು ತಾಲೂಕಿನ ಪೆರೇಸಂದ್ರ ಕ್ರಾಸ್ ನಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಿದರು. ಹೈದ್ರಾಬಾದ್ ನಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ರಾಷ್ಟ್ರೀಯ ಹೆದ್ದಾರಿ 7 ಮೂಲಕ ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ ಬ್ರಹ್ಮಾನಂದಂ ಸುಧಾಕರ್ ಸ್ವಗ್ರಾಮ ಪೆರೇಸಂದ್ರದಲ್ಲಿ ಸುಧಾಕರ್ ಪರ ಚುನಾವಣೆ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಅವರು ,ಸುಧಾಕರ್ ನನಗೆ ಆತ್ಮೀಯ ಸ್ನೇಹಿತ, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವ ವ್ಯಕ್ತಿ. ಇಂಥವರನ್ನು ಚುನಾವಣೆಯಲ್ಲಿ ಗೆಲ್ಲಿಸಿದರೆ ಕ್ಷೇತ್ರದ ಅಭಿವೃದ್ಧಿ ಆಗುತ್ತದೆ. ಆದ್ದರಿಂದ ನಾನು ಹೈದ್ರಾಬಾದ್ ನಿಂದ ಇವರ ಪರ ಪ್ರಚಾರಕ್ಕೆ ಬಂದಿದ್ದೇನೆ. ಇವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಿ ಅವರ ಗೆಲುವಿನ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮತ್ತೆ ನಾನು ಭಾಗವಹಿಸುತ್ತೇನೆ ಎಂದು ನೆರದಿದ್ದ ಕಾರ್ಯಕರ್ತರನ್ನು ಹುರಿದುಂಬಿಸಿದರು.


 
Top