क्षेत्रीय

Blog single photo

ಸಿಪಿ ಯೋಗೀಶ್ವರ್ ಗೆ ಸಿದ್ಧರಾಮಯ್ಯ ಕರೆ - ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

09/10/2019


ಬೆಂಗಳೂರು, ಅ.09 (ಹಿ.ಸ) - ಆಪರೇಷನ್ ಕಮಲ ಕಾರ್ಯಾಚರಣೆಯಲ್ಲಿ ಹಾಗು ಬಿಎಸ್​ವೈ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಚನ್ನಪಟ್ಟಣ ಮಾಜಿ ಶಾಸಕ ಸಿ.ಪಿ. ಯೋಗೇಶ್ವರ್ ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಯಡಿಯೂರಪ್ಪ ಅವರ ಬಲಗೈ ಭಂಟನಂತಿದ್ದ  ಯೋಗೇಶ್ವರ್, ಆಪರೇಷನ್ ಕಮಲದ ಮೂಲಕ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಸಕ್ರಿಯ ಪಾತ್ರ ವಹಿಸಿದರೂ ಸೂಕ್ತ ಸ್ಥಾನಮಾನ ಸಿಗಲಿಲ್ಲ ಎಂದು ಬೇಸರಗೊಂಡಿದ್ದಾರೆ ಎನ್ನಲಾಗಿದೆ. 
ಬಿಜೆಪಿ ಸರ್ಕಾರ ರಚನೆ ಆದರೆ, ಪ್ರಮುಖ ಖಾತೆ ನೀಡುವುದಾಗಿ ಯೋಗೀಶ್ವರ್ ಗೆ ಯಡಿಯೂರಪ್ಪ ವಾಗ್ದಾನ ನೀಡಿದ್ದರಂತೆ. ಆದರೆ, ಇದೀಗ ಯೋಗೀಶ್ವರ್ ಗೆ ಖಾತೆ ಸಿಗುವುದಿರಲಿ, ಸಚಿವ ಸಂಪುಟದಲ್ಲೇ ಸ್ಥಾನವೇ ಸಿಕ್ಕಿಲ್ಲ. ಹೀಗಾಗಿ ಸಿ.ಪಿ. ಯೋಗೇಶ್ವರ್ ಅತೀವ ನೋವಿನಲ್ಲಿದ್ದಾರೆ ಎಂದು ಅವರ ಆಪ್ತ ವಲಯಗಳು ಹೇಳುತ್ತಿವೆ. ಚನ್ನಪಟ್ಟಣದ ಪ್ರಮುಖ ಒಕ್ಕಲಿಗ ನಾಯಕರಾದ ಯೋಗೇಶ್ವರ್ ಗೆ ಬಿಜೆಪಿ ಸಂಪುಟದಲ್ಲಿ ಸ್ಥಾನವೂ ಇಲ್ಲ, ವಿಧಾನ ಪರಿಷತ್ ಸದಸ್ಯನ್ನಾಗಿಯೂ ಮಾಡಿಲ್ಲ, ಇದನ್ನೇ ಬಂಡವಾಳವಾಗಿಸಿಕೊಳ್ಳಲು ಮುಂದಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಯೋಗೇಶ್ವರ್ ಜೊತೆ ಮಾತುಕತೆ ನಡೆಸಿದ್ದಾರೆ. ಮುಂಬರುವ ವಿಧಾನ ಸಭೆ ಉಪ ಚುನಾವಣೆ ಗಮನದಲ್ಲಿರಿಸಿಕೊಂಡು ಸಿದ್ದರಾಮಯ್ಯ ದಾಳ ಉರುಳಿಸಲು ಮುಂದಾಗಿದ್ದಾರೆ.  
ಇದೀಗ ಮಾಜಿ ಸಚಿವ ಡಿಕೆ ಶಿವಕುಮಾರ್ ಜೈಲಿನಲ್ಲಿದ್ದಾರೆ. ಸಂಸದ ಡಿಕೆ ಸುರೇಶ್ ಇಡಿ ವಿಚಾರಣೆ ಧಾವಂತದಲ್ಲಿದ್ದಾರೆ. ಈ ವೇಳೆ ರಾಮನಗರ ಜಿಲ್ಲೆಯಲ್ಲಿ ರಾಜಕೀಯ ಶೂನ್ಯತೆ ಸೃಷ್ಟಿಯಾಗಿದೆ.  ಜಿಲ್ಲೆಯಲ್ಲಿ ಹಿಡಿತ ಸಾಧಿಸಲು ಸಿಪಿವೈಗೆ ಇದು ಸಕಾಲವಾಗಿದೆ. ಹೀಗಾಗಿ, ಅವರು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೇರಲು ಯೋಜಿಸಿದ್ದಾರೆಂಬ ಸುದ್ದಿ ಕೇಳಿಬರುತ್ತಿದೆ ಇದರಿಂದ ಸಿದ್ದರಾಮಯ್ಯ ಮತ್ತು ಡಿಕೆಶಿ ಸಂಬಂಧ ಮತ್ತಷ್ಟು ಹಾಳಾಗಲಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಡಿಕೆ ಶಿವಕುಮಾರ್ ಮತ್ತು ಎಚ್.ಡಿ. ಕುಮಾರಸ್ವಾಮಿ ಜೊತೆಗೂಡಿ ಯೋಗೇಶ್ವರ್ ಅವರನ್ನು ಸೋಲಿಸಿದ್ದರು. ಈಗ ಯೋಗೇಶ್ವರ್ ಜೊತೆ ಸಿದ್ದರಾಮಯ್ಯ ಮಾತುಕತೆ ನಡೆಸಿರುವುದು ಶಿವಕುಮಾರ್ ಶಿಬಿರದಲ್ಲಿ ಆತಂಕ ಮೂಡಿಸಿದೆ.


 
Top