ट्रेंडिंग

Blog single photo

ಏಡ್ಸ್ ಸೋಂಕು ತಡೆಗಟ್ಟಲು ಆರೋಗ್ಯ ಇಲಾಖೆಯ ಜೊತೆ ಕೈಜೋಡಿಸಲು ಕರೆ

02/12/2019

ಏಡ್ಸ್ ಸೋಂಕು ತಡೆಗಟ್ಟಲು ಆರೋಗ್ಯ ಇಲಾಖೆಯ ಜೊತೆ ಕೈಜೋಡಿಸಲು ಕರೆ

ಕೋಲಾರ ಡಿ.02 (ಹಿ.ಸ) : ಹೆಚ್.ಐ.ವಿ.ಸೋಂಕು ತಗುಲದಂತೆ ಎಚ್ಚರಿಕೆ ವಹಿಸುವ ಅಗತ್ಯವಿದೆ. ಏಡ್ಸ್ ಸೋಂಕನ್ನು ಸಂಪೂರ್ಣವಾಗಿ ನಿವಾರಣೆ ಮಾಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಜೊತೆಯಲ್ಲಿ ಜನಸಾಮಾನ್ಯರು ಕೈ ಜೋಡಿಸುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಸಿ.ಎಸ್. ವೆಂಕಟೇಶ್ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಮತ್ತು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಕೋಲಾರ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಏಡ್ಸ್ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಸರ್ಕಾರವು ಹೆಚ್.ಐ.ವಿ ಸೋಂಕಿತರಿಗೆ ನೀಡಿರುವ ಯೋಜನೆಗಳ ಅರಿವನ್ನು ವೈದ್ಯಾಧಿಕಾರಿಗಳು ಮೂಡಿಸಬೇಕು. ಸರ್ಕಾರಿ ಅಧಿಕಾರಿಗಳು ಸರ್ಕಾರಿ ಸೌಲಭ್ಯಗಳನ್ನು ಫÀಲಾನುಭವಿಗಳಿಗೆ ಪಾರದರ್ಶಕವಾಗಿ ತಲುಪಿಸಬೇಕು. ಹೆಚ್ಚು ಯುವ ಜನತೆ ಇರುವ ಕಾಲೇಜುಗಳಲ್ಲಿ ಹೆಚ್.ಐ.ವಿ ಸೋಂಕಿನ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಕೋಲಾರ ತಾಲ್ಲೂಕು ಪಂಚಾಯತ್ ಅಧ್ಯಕ್ಷ ಸೂಲೂರು ಎಂ.ಆಂಜಿನಪ್ಪ ಮಾತನಾಡಿ, ವಿಶ್ವದಲ್ಲೇ ನಮ್ಮ ದೇಶವು ರಕ್ಷಣೆ, ನ್ಯಾಯಾಂಗ ಮತ್ತು  ಆರೋಗ್ಯ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ಜಿಲ್ಲೆಯಲ್ಲಿ ಹೆಚ್.ಐ.ವಿ ರೋಗದ ಬಗ್ಗೆ ಅರಿವನ್ನು ಮೂಡಿಸುವ ಅನೇಕ ಕಾರ್ಯಕ್ರಮಗಳನ್ನು ಪದವಿ ಪೂರ್ವ ಕಾಲೇಜುಗಳಲ್ಲಿ ಹಮ್ಮಿಕೊಂಡು ಸಂಪನ್ಮೂಲ ವ್ಯಕ್ತಿಗಳ ಮೂಲಕ ಯುವಜನತೆಯಲ್ಲಿ ಜಾಗೃತಿ ಮೂಡಿಸಬೇಕು.  ಇದಕ್ಕೆ ಅನುದಾನದ ಅವಶ್ಯಕತೆ ಇದ್ದರೆ ನಾನು ದಾನಿಗಳ ಮೂಲಕ ಕೊಡಿಸುತ್ತೇನೆÉಂದು ತಿಳಿಸಿದರು.
ಹೆಚ್.ಐ.ವಿ ರೋಗದ ಬಗ್ಗೆ ಮುಕ್ತ ಚರ್ಚೆಗಳಾಗಬೇಕು. ಲೈಂಗಿಕ ಶಿಕ್ಷಣದ ಬಗ್ಗೆ ಅಧ್ಯಯನಗಳಾಗಬೇಕು ಇದಕ್ಕೆ ನಮ್ಮಲ್ಲಿರುವ ಮೂಡನಂಬಿಕೆಗಳ ಕೈಬಿಡಬೇಕು. ಮಡಿವಂತಿಕೆಯಿಂದ ನಾವು ಹೊರಬರಬೇಕು ಎಂದು ತಿಳಿಸಿದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಎಂ ಜಗದೀಶ್ ಮಾತನಾಡಿ ಹೆಚ್.ಐ.ವಿ ಒಂದು ಮನುಕುಲಕ್ಕೆ ಬಂದಿರುವ ಮಾಹಾಮಾರಿ ಕಾಯಿಲೆ.  ಈ ಕಾಯಿಲೆಗೆ ಸಂಪೂರ್ಣ ಚಿಕಿತ್ಸೆ ಇಲ್ಲ. ಅವರು ಜೀವನ ಪೂರ್ತಿ ಮಾತ್ರೆಯನ್ನು ನುಂಗಬೇಕು. ಆದ್ದರಿಂದ ಈ ಕಾಯಿಲೆ ಬರದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಕಿವಿಮಾತು ಹೇಳಿದರು.
ಏಡ್ಸ್ ರೋಗವು ಅಸುರಕ್ಷಿತ ಲೈಂಗಿಕತೆ, ಪರೀಕ್ಷಿಸದ ರಕ್ತ ಸರಬರಾಜು, ಸಂಸ್ಕರಿಸದ ಅಥವಾ ಬಳಸಿದ ಸಿರಂಜ್ ಬಳಕೆ ಹಾಗೂ ಸೋಂಕಿತ ತಾಯಿಯಿಂದ ಮಗುವಿಗೆ ಹೀಗೆ ನಾಲ್ಕು ವಿಧಾನಗಳಲ್ಲಿ ಹೆಚ್.ಐ.ವಿ ಸೋಂಕು ಹರಡುತ್ತದೆ. ಸೋಂಕಿತ ವ್ಯಕ್ತಿಯ ಜೊತೆ ಸೇರುವುದರಿಂದ, ಶೌಚಾಲಯ ಬಳಕೆಯಿಂದ, ಜೊತೆಯಲ್ಲಿ ಊಟ ಮಾಡುವುದರಿಂದ ಅಥವಾ ಸೋಂಕಿತ ವ್ಯಕ್ತಿಯ ಬಟ್ಟೆ ಧÀರಿಸುವುದರಿಂದ ಹರಡುವುದಿಲ್ಲ ಎಂದು ಮಾಹಿತಿ ನೀಡಿದರು.
ಪ್ರತಿಯೊಬ್ಬ ಗರ್ಭಿಣಿಯು ಹೆಚ್.ಐ.ವಿ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಬೇಕು. ಸರ್ಕಾರವು ಸೋಂಕಿತರಿಗೆ ಕಾಬಾ ಯೋಜನೆಯಡಿ ಮಾಸಿಕ 1000 ರೂ ಸಹಾಯಧನ ನೀಡುತ್ತದೆ. ಸೋಂಕಿತ ಬಿಪಿಎಲ್ ಕಾರ್ಡ್‍ದಾರರಿಗೆ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಕಾರ್ಡ್ ನೀಡಲಾಗುತ್ತದೆ.  ಯಾರಾದರೂ ಸೋಂಕಿತರಿಗೆ ತಾರತಮ್ಯವನ್ನು ಉಂಟುಮಾಡಿದರೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ ಜುಲ್ಮಾನೆಯನ್ನು ವಿಧಿಸಲು ಕಾನೂನಿನಲ್ಲಿ ಅವಕಾಶ ಕಲ್ಪಿಸಿದ್ದು, ಹೆಚ್.ಐ.ವಿ ಸೋಂಕಿತರಿಗೆ ಯಾರು ತಾರತಮ್ಯ ಮಾಡಬಾರದು ಎಂದು ತಿಳಿಸಿದರು. 
ಕಾರ್ಯಕ್ರಮಕ್ಕೂ ಮುನ್ನ ನಗರದ ಪ್ರವಾಸಿ ಮಂದಿರದ ಬಳಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಿ.ಎಸ್. ವೆಂಕಟೇಶ್ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಏಡ್ಸ್ ಬಗ್ಗೆ ಜಾಗೃತಿ ಮೂಡಿಸಿದ ಹಾಗೂ ಏಡ್ಸ್ ನಿಯಂತ್ರಣಕ್ಕೆ ಸೇವೆ ಸಲ್ಲಿಸಿದ ಸಂಘ ಸಂಸ್ಥೆಯ ಪದಾಧಿಕಾರಿಗಳು ಹಾಗೂ  ವೈದ್ಯಾಧಿಕಾರಿಗಳಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಎಸ್.ಎನ್.ವಿಜಯ್‍ಕುಮಾರ್, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ಚಂದನ್, ಎಸ್.ಎನ್.ಆರ್ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಎಸ್.ಎನ್ ವಿಜಯಲಕ್ಷೀ, ಕೋಲಾರ ತಾಲ್ಲೂಕು ವೈದ್ಯಾಧಿಕಾರಿÀ ರಮ್ಯಾ ದೀಪಿಕಾ, ಮುಳಬಾಗಿಲು ತಾಲ್ಲೂಕು ವೈದ್ಯಾಧಿಕಾರಿ ವೇಣುಗೋಪಾಲ್ ಭಾಗವಹಿಸಿದ್ದರು.

ಚಿತ್ರ :  ಕೋಲಾರದಲ್ಲಿ ಜಿಲ್ಲಾ ಏಡ್ಸ್ ಸಂಸ್ಥೆಯ ಆಶ್ರಯದಲ್ಲಿ ನಡೆದ ಜಾಗೃತಿ ಜಾಥಾಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವೆಂಕಟೇಶ್ ಚಾಲನೆ ನೀಡಿದರು.

             


 
Top