खेल

Blog single photo

ಇಂಗ್ಲೆಂಡ್ ಪ್ರವಾಸಕ್ಕೆ ಮುನ್ನ ಟೀಂ ಇಂಡಿಯಾ ಆಟಗಾರರಿಗೆ 3 ಬಾರಿ ಕೋವಿಡ್ ಪರೀಕ್ಷೆ

15/05/2021

ನವದೆಹಲಿ,ಮೇ 15 : ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಮತ್ತು ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲು ಇಂಗ್ಲೆಂಡ್ ಗೆ ತೆರಳುವ ಮುನ್ನ ಟೀಂ ಇಂಡಿಯಾಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ 3 ಬಾರಿ ಕೋವಿಡ್ ಟೆಸ್ಟ್ ನಡೆಸಲು ನಿರ್ಧರಿಸಿದೆ.  

ಎಲ್ಲಾ ಆಟಗಾರರು ಮೇ 19ರಂದು ಮುಂಬೈನಲ್ಲಿ ಸೇರಲಿದ್ದಾರೆ.ಇದಕ್ಕೂ ಮುನ್ನ ಮೂರು ಆರ್‌ಟಿ-ಪಿಸಿಆರ್ ಪರೀಕ್ಷೆಗಳಿಗೆ ಒಳಗಾಗಲು ವ್ಯವಸ್ಥೆ ಮಾಡಲಾಗಿದೆ. ಆಟಗಾರರು ತಮ್ಮ ಮನೆಗಳಲ್ಲಿ ಮೂರು ಆರ್‌ಟಿ-ಪಿಸಿಆರ್ ಪರೀಕ್ಷೆಗಳಿಗೆ ಒಳಗಾಗಲಿದ್ದಾರೆ. ಯಾವ ಆಟಗಾರರಿಗೆ ನೆಗೆಟಿವ್ ಬರುತ್ತದೆಯೋ ಅವರು ಮೇ 19ರಂದು ಮುಂಬೈನಲ್ಲಿ ಒಟ್ಟುಗೂಡಲಿದ್ದಾರೆ. ಜೂನ್ 2ರಂದು ಬ್ರಿಟನ್ ಗೆ ತೆರಳುವ ಮುನ್ನ ಮುಂಬೈನಲ್ಲಿ 14 ದಿನಗಳ ಕಾಲ ಕ್ವಾರಂಟೈನ್ ಗೆ ಒಳಗಾಗಬೇಕು. 

ಬ್ರಿಟನ್ ಗೆ ತೆರಳಲಿರುವ ಬಹುತೇಕ ಆಟಗಾರರು ಕೋವಿಡ್ ಮೊದಲ ಡೋಸ್ ತೆಗೆದುಕೊಂಡಿದ್ದಾರೆ. ಇನ್ನು ಎರಡನೇ ಡೋಸ್ ಅನ್ನು ಇಂಗ್ಲೆಂಡ್ ನಲ್ಲಿ ತೆಗೆದುಕೊಳ್ಳುವ  ನಿರೀಕ್ಷೆ ಇದೆ.

 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬ ವ್ಯಕ್ತಿಯೂ ಲಸಿಕೆ ಹಾಕಿಸಿಕೊಳ್ಳಲು ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದೆ. ಈಗಾಗಲೇ ಆಟಗಾರರು ಮೊದಲ ಡೋಸ್ ತೆಗೆದುಕೊಂಡಿದ್ದಾರೆ. ಇನ್ನು ಎರಡನೇ ಡೋಸ್ ತೆಗೆದುಕೊಳ್ಳುವ ಸಮಯದಲ್ಲಿ ಅವರೆಲ್ಲಾ ಇಂಗ್ಲೆಂಡ್  ಪ್ರವಾಸದಲ್ಲಿರುತ್ತಾರೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಂಗ್ಲೆಂಡ್ ನಲ್ಲಿ ಲಸಿಕೆ ಹಾಕಿಸಲು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯೊಂದಿಗೆ ಮಾತುಕತೆ ನಡೆಸಿದ್ದೇವೆ. ಅದು ಸಾಧ್ಯವಾಗದಿದ್ದರೆ ಇಲ್ಲಿಂದಲೆ ಲಸಿಕೆಯನ್ನು ತೆಗೆದುಕೊಂಡು ಹೋಗಲಾಗುವುದು ಎಂದು ಅವರು ಹೇಳಿದರು.


 
Top