राष्ट्रीय

Blog single photo

ಭಾರತ - ಶ್ರೀಲಂಕಾದ ಜನರ ಕಲ್ಯಾಣಕ್ಕಾಗಿ ಒಟ್ಟಾಗಿ ಕೆಲಸ - ಜಿ. ರಾಜಪಕ್ಸೆ

29/11/2019


ನವದೆಹಲಿ,ನ.29 (ಹಿ.ಸ) - ಭಾರತ ಹಾಗು ಶ್ರೀಲಂಕಾದ ಜನರ ಅನುಕೂಲಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದು ಶ್ರೀಲಂಕಾ ಅಧ್ಯಕ್ಷ ಗೋಟಬಯಾ ರಾಜಪಕ್ಸೆ ಹೇಳಿದ್ದಾರೆ.  ಶ್ರೀಲಂಕಾ ಅಧ್ಯಕ್ಷರು ಭಾರತದೊಂದಿಗೆ ತಮ್ಮ ದೇಶದ ದ್ವಿಪಕ್ಷೀಯ ಸಂಬಂಧವನ್ನು ಅತ್ಯಂತ ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಪ್ರಯತ್ನಿಸುವುದಾಗಿ ಹೇಳಿದ್ದಾರೆ. ದೆಹಲಿಗೆ ಆಗಮಿಸಿದಾಗ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಭಯ ದೇಶಗಳ ಜನರ ಸುರಕ್ಷತೆ ಹಾಗು ಒಟ್ಟಾರೆ ಕಲ್ಯಾಣಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ಭಾರತ ಮತ್ತು ಶ್ರೀಲಂಕಾ ದೇಶಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ಅಭಿಪ್ರಾಯಪಟ್ಟರು. ರಾಜಪಕ್ಷೆ ಮೂರು ದಿನಗಳ ಅಧಿಕೃತ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ.  ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜಪಕ್ಷೆ  ದ್ವಿಪಕ್ಷೀಯ ಸಂಬಂಧಗಳ ಸಂಪೂರ್ಣ ವಿಸ್ತಾರವನ್ನು ಒಳಗೊಂಡ ಮಾತುಕತೆ ನಡೆಸುತ್ತಿದ್ದಾರೆ. ತಾವು ಅಧ್ಯಕ್ಷನಾಗಿದ್ದ ಅವಧಿಯಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ ಸಂಬಂಧವನ್ನು ಅತ್ಯಂತ ಉನ್ನತ ಮಟ್ಟಕ್ಕೆ ತರಲು ನಾನು ಬಯಸುತ್ತೇನೆ. ಐತಿಹಾಸಿಕವಾಗಿ ಮತ್ತು ರಾಜಕೀಯವಾಗಿ ನಾವು ದೀರ್ಘಕಾಲದ ಸಂಬಂಧವನ್ನು ಹೊಂದಿದ್ದೇವೆ. ಭಾರತ ಮತ್ತು ಶ್ರೀಲಂಕಾದ ಜನರ ಅನುಕೂಲಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡಬೇಕಾಗಿದೆ.  ಇದಕ್ಕೂ ಮುನ್ನ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಹಲವಾರು ದ್ವಿಪಕ್ಷೀಯ ಮತ್ತು ಪ್ರಾದೇಶಿಕ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಶ್ರೀಲಂಕಾದ ತಮಿಳು ಸಮುದಾಯದ ಆಕಾಂಕ್ಷೆಗಳನ್ನು ಈಡೇರಿಸುವುದು. ಹಿಂದು ಮಹಾಸಾಗರ ಪ್ರದೇಶದ ಸ್ಥಿತಿಗತಿ ಪಾರ ಮತ್ತು ಹೂಡಿಕೆ ಸಂಬಂಧಗಳನ್ನು ಹೆಚ್ಚಿಸುವ ಕ್ರಮಗಳು ಸೇರಿದಂತೆ ಹಲವು ವಿಷಯಗಳು ಮೋದಿ ಹಾಗು ರಾಜಪಕ್ಸೆ ಮಾತುಕತೆಯಲ್ಲಿ ಕಂಡುಬರಲಿದೆ. ಕಳೆದ ವಾರ, ಭಾರತವು ಹೊಸದಾಗಿ ರಚನೆಯಾಗಿರುವ ಶ್ರೀಲಂಕಾ ಸರ್ಕಾರದೊಡನೆ  ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತಿದೆ ಎಂದಿತ್ತು.  ಶ್ರೀಲಂಕಾದಲ್ಲಿರುವ ತಮಿಳು ಸಮುದಾಯದ ಆಕಾಂಕ್ಷೆಗಳನ್ನು ಈಡೇರಿಸಲು ಸಾಧ್ಯವಾಗಲಿದೆ ಎಂಬ ಆಶಯವನ್ನು ವ್ಯಕ್ತಪಡಿಸಿತ್ತು.
ದೇಶದ ಸುದೀರ್ಘ ಅಂತರ್ಯುದ್ಧವನ್ನು ಕೊನೆಗೊಳಿಸಿದ ಕೀರ್ತಿಗೆ ಪಾತ್ರರಾದ ಮಾಜಿ ರಕ್ಷಣಾ ಕಾರ್ಯದರ್ಶಿ ರಾಜಪಕ್ಸೆ  ದ್ವೀಪ ರಾಷ್ಟ್ರದ ಅಧ್ಯಕ್ಷೀಯ ಚುನಾವಣೆಯಲ್ಲಿ ವಿಜಯಸಾಧಿಸಿ,  ನವೆಂಬರ್ 18 ರಂದು ಹೊಸ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದರು. ಮೂರು ದಿನಗಳ ಬಳಿಕ ತಮ್ಮ ಹಿರಿಯ ಸಹೋದರ ಮಹಿಂದಾ ರಾಜಪಕ್ಸೆ ಅವರನ್ನು ಪ್ರಧಾನ ಮಂತ್ರಿಯಾಗಿ ನೇಮಿಸಿದರು.


 
Top