ಸಪ್ತಪದಿ ತುಳಿದ ನಟ ಅ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ - ಪ್ರೇರಣಾ
26/11/2019
ಬೆಂಗಳೂರು, ನ.26 (ಹಿ.ಸ) - ಸ್ಯಾಂಡಲ್ ವುಡ್ ನಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ವೃಶ್ಚಿಕ ಶುಭ ಲಗ್ನದಲ್ಲಿ ಗೆಳತಿ ಪ್ರೇರಣಾ ಜೊತೆ ಧ್ರುವ ಸರ್ಜಾ ಸಪ್ತಪದಿ ತುಳಿದಿದ್ದಾರೆ. ಬೆಂಗಳೂರಿನ ಜೆಪಿ ನಗರದ ಕಲ್ಯಾಣ ಮಂಟಪದಲ್ಲಿ ಕುಟುಂಬಸ್ಥರು, ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಧ್ರುವ ಅವರು ಪ್ರೇರಣಾರನ್ನು ವರಿಸಿದರು.