क्षेत्रीय

Blog single photo

ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಕಾಂಗ್ರೆಸ್ಸಿನಲ್ಲಿ ಕಿತ್ತಾಟ ಇಲ್ಲ - ಮಲ್ಲಿಕಾರ್ಜುನ ಖರ್ಗೆ

09/10/2019


ಕಲಬುರಗಿ, ಅ.09 (ಹಿ.ಸ) - ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಕಾಂಗ್ರೆಸ್ಸಿನಲ್ಲಿ ಯಾವುದೇ ಕಿತ್ತಾಟ ಇಲ್ಲ ಎಂದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಇಂದು ಪ್ರತಿ ಪಕ್ಷದ ನಾಯಕರ ಆಯ್ಕೆ ನಡೆಯಲಿದೆ.  ನಾಯಕರುಗಳ ವಿಭಿನ್ನ ಹೇಳಿಕೆಯನ್ನೇ ಮಾಧ್ಯಮಗಳು ಕಿತ್ತಾಟ ಎಂದು ಬಿಂಬಿಸುವುದು ತಪ್ಪು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ‌ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಪಕ್ಷದ ನಾಯಕರಲ್ಲಿ ಅಭಿಪ್ರಾಯ ಬೇಧ ಇದ್ದೇ ಇರುತ್ತಾವೆ. ಮಾಧ್ಯಮಗಳು ಈ ಬಗ್ಗೆ ಸೃಷ್ಟಿಸಿಕೊಂಡು  ಹೇಳಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪಕ್ಷ ಸೇರಿದ ಮೇಲೆ ಎಲ್ಲರೂ ಕಾಂಗ್ರೆಸ್ಸಿಗರು.  ಇಲ್ಲಿ ಮೂಲ, ವಲಸಿಗ ಎಂಬ ಬೇಧ-ಭಾವ ಇಲ್ಲ. ಕಾಂಗ್ರೆಸ್ ಸಮುದ್ರ ಇದ್ದಂತೆ.  ಪಕ್ಷದೊಳಗಿನ ಮುನಿಸುಗಳ ಬಗ್ಗೆ ಮಾತಾಡಿಕೊಳ್ಳಲಿ. ಆದರೆ, ಅದನ್ನು ಬಹಿರಂಗಪಡಿಸಬಾರದು ಎಂದು  ಹೇಳಿದರು. ರಾಜ್ಯ ಬಿಜೆಪಿ ಸರ್ಕಾರಕ್ಕೆ ನಿರ್ಣಯ ಕೈಗೊಳ್ಳಲು ತೊಂದರೆಯಾಗುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೇಂದ್ರ ಸರ್ಕಾರದಿಂದ ಸಹಕಾರ ಸಿಗುತ್ತಿಲ್ಲ. ಬಿಜೆಪಿಯಲ್ಲೂ ಸ್ಥಳಿಯ ಮಟ್ಟದಲ್ಲಿ ಸಾಕಷ್ಟು ಭಿನ್ನಾಭಿಪ್ರಾಯಗಳಿವೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.


 
Top