आर्थिक

Blog single photo

ರಾಜ್ಯಾದ್ಯಂತ ಕೆ.ಎಸ್.ಆರ್.ಟಿ.ಸಿ ಆಕ್ಸಿಜನ್ ಬಸ್ ವ್ಯವಸ್ಥೆ : ಎಸ್.ಅಂಗಾರ

17/05/2021

ಚಿಕ್ಕಮಗಳೂರು,ಮೇ ೧೭(ಹಿ.ಸ): ಕೋವಿಡ್ ಸೋಂಕಿತರ ಹಿತದೃಷ್ಟಿಯಿಂದ ತಾತ್ಕಾಲಿವಾಗಿ ಕರ್ನಾಟಕ ರಾಜ್ಯಾದ್ಯಂತ ಕೆ.ಎಸ್.ಆರ್.ಟಿ.ಸಿ ಸಂಸ್ಥೆಯು ಆಕ್ಸಿಜನ್ ಬಸ್ ವ್ಯವಸ್ಥೆಯನ್ನು ಪ್ರಾರಂಭಿಸಲಾಗಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು. 


ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಆಕ್ಸಿಜನ್ ಬಸ್‌ಗಳ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಜನರಿಗೆ ಕೋವಿಡ್ ಸೋಂಕು ತಗುಲಿದ ಸಂದರ್ಭದಲ್ಲಿ ಅವರಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯಲು ವ್ಯವಸ್ಥೆ ಮಾಡಿದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡುವ ಪ್ರಮಾಣವನ್ನು ಕಡಿಮೆ ಮಾಡಬಹುದಾಗಿದೆ ಎಂದು ಸಲಹೆ ನೀಡಿದರು. 

ಶಾಸಕ ಸಿ.ಟಿ.ರವಿ ಮಾತನಾಡಿ, ಪ್ರಾಥಮಿಕ ಹಂತದಲ್ಲಿ ಕೋವಿಡ್ ರೋಗಿಗಳಿಗೆ ನೆರವಾಗುವ ದೃಷ್ಠಿಯಿಂದ ಆಕ್ಸಿಜನ್ ಬಸ್‌ಗಳನ್ನು ಆರಂಭಿಸಿದ್ದು, ಇದರಿಂದ ರೋಗಿಗಳ ಹಾಗೂ ಅಂಬುಲೆನ್ಸ್‌ಗಳ ಮೇಲೆ ಉಂಟಾಗುವ ಪ್ರಾರಂಭಿಕ ಸಮಸ್ಯೆಗಳನ್ನು ಬಗೆಹರಿಸಬಹುದಾಗಿದೆ ಎಂದ ಅವರು ಹಳ್ಳಿಗಳಲ್ಲಿ ಸೋಂಕು ಹೆಚ್ಚಳವಾಗುತ್ತಿರುವುದು ಆತಂಕ ತಂದಿದ್ದು, ಆಕ್ಸಿಜನ್ ಮತ್ತು ವೆಂಟಿಲೇಟರ್‌ಗಳ ಬೇಡಿಕೆಗಳಿಗನುಗುಣವಾಗಿ ಅವುಗಳ ಸಂಖ್ಯೆ ಹೆಚ್ಚಿಸಲಾಗುವುದು ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಿ.ಶಿಖಾ, ಜಿಲ್ಲಾಧಿಕಾರಿ ಕೆ.ಎನ್.ರಮೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಪೂವಿತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹೆಚ್, ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪ, ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ಹೆಚ್.ಎಲ್.ನಾಗರಾಜ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ ಎಸ್.ಕೆ/ಮ.ಯ 
Top