मनोरंजन

Blog single photo

ಜನ್ಮದಿನವೇ ಟ್ವಿಟ್ಟರ್ ಹಾಗು ಫೇಸ್ ಬುಕ್ ಖಾತೆ ತೆರೆದ ಶಿವಣ್ಣ

12/07/2019


ಬೆಂಗಳೂರು, ಜು.12 (ಹಿ.ಸ) - ಸೆಂಚುರಿ ಸ್ಟಾರ್ ಶಿವರಾಜ್‍ಕುಮಾರ್ ಹುಟ್ಟುಹಬ್ಬದ ದಿನ ಟ್ವಿಟ್ಟರ್ ಹಾಗು ಫೇಸ್‍ಬುಕ್‍ನಲ್ಲಿ ಅಧಿಕೃತ ಖಾತೆ ತೆರೆಯುವ ಮೂಲಕ ಅಭಿಮಾನಿಗಳಿಗೆ ಅಶ್ಚರ್ಯ ಪಡುವಂತೆ ಮಾಡಿದ್ದಾರೆ. 
ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಳ್ಳದ ಶಿವಣ್ಣ ಇದೀಗ ಅಧಿಕೃತವಾಗಿ ಫೇಸ್‍ಬುಕ್ ಹಾಗು ಟ್ವಿಟ್ಟರ್ ಖಾತೆ ತೆರೆದಿದ್ದಾರೆ. ಈ ಬಗ್ಗೆ ಅವರು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕುವ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಶಸ್ತ್ರ ಚಿಕಿತ್ಸೆಗಾಗಿ ಲಂಡನ್‍ಗೆ ತೆರಳಿದ್ದರು. ನಿನ್ನೆ ಅವರ ಶಸ್ತ್ರಚಿಕಿತ್ಸೆ ಯಶ್ವಸಿಯಾಗಿ ನಡೆದಿತ್ತು. ಶಿವಣ್ಣ ಅವರ ಜೊತೆ ಪತ್ನಿ ಗೀತಾ ಶಿವರಾಜ್ ಕುಮಾರ್, ಪುತ್ರಿ ನಿವೇದಿತಾ ಕೂಡ ಲಂಡನ್‍ಗೆ ತೆರಳಿದ್ದಾರೆ.  ಪುನೀತ್ ರಾಜಕುಮಾರ್ ಅವರು ಕೂಡ ಲಂಡನ್‍ಗೆ ತೆರಳಿ ಅವರ ಆರೋಗ್ಯವನ್ನು ನೋಡಿಕೊಳ್ಳುತ್ತಿದ್ದಾರೆ.


 
Top