ಬೆಂಗಳೂರು, 01 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನಾರೋಗ್ಯದ ಹಿನ್ನೆಲೆ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಿಹಾರ ರಾಜ್ಯ ಹಾಗೂ ಸರಣಿ ಪ್ರವಾಸಗಳಿಂದಾಗಿ ಖರ್ಗೆ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಸಾಮಾನ್ಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವೈದ್ಯರು ಸಾಮಾನ್ಯ ಪರೀಕ್ಷೆಗಳೊಂದಿಗೆ ಇಸಿಜಿ ಪರೀಕ್ಷೆ ನಡೆಸಿದ್ದು, ಖರ್ಗೆ ಅವರು ಇಂದು ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa