ವಿಜಯಪುರ, 01 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ವಿಜಯದಶಮಿ ಹಾಗೂ ಆಯುಧ ಪೂಜೆ ಹಿನ್ನೆಲೆ ವಿಜಯಪುರ ನಗರದ ಪೊಲೀಸ ಠಾಣೆಯಲ್ಲಿ ಆಯುಧಗಳಿಗೆ ಪೂಜೆ ಸಲ್ಲಿಸಲಾಯಿತು.
ಎಸ್ಪಿ ಲಕ್ಷ್ಮಣ ನಿಂಬರಗಿ ಆಯುಧಗಳಿಗೆ ಪೂಜೆ ಸಲ್ಲಿಸಿ, ತೆಂಗಿನಕಾಯಿ ಒಡೆದು ಪೂಜೆ ಮಾಡಿದರು.
ನಗರದ ಗಾಂಧಿ ಚೌಕ್ ಪೊಲೀಸ, ಸಂಚಾರಿ ಪೊಲೀಸ, ಮಹಿಳಾ ಪೊಲೀಸ ಹಾಗೂ ಸಿಇಎನ್ ಪೊಲೀಸ ಠಾಣೆಯಲ್ಲಿ ಆಯುಧ ಪೂಜೆಯನ್ನು ಪೊಲೀಸರು ಅದ್ಧೂರಿಯಾಗಿ ಮಾಡಿದರು. ಅಲ್ಲದೇ, ಪೊಲೀಸ ವಾಹನಗಳಿಗೂ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಡಿವೈಎಸ್ಪಿ ಬಸವರಾಜ್ ಯಲಿಗಾರ, ಸಿಪಿಐ, ಪಿಎಸ್‌ಐಗಳು ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande