ಗದಗ, 01 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : 2025-26 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ನೀಡಲಾಗುತಿದೆ,
ತರಬೇತಿಗೆ ವಿದ್ಯಾರ್ಥಿಗಳಿಂದ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03.10.2025.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8277799990 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
ಹಿಂದೂಸ್ತಾನ್ ಸಮಾಚಾರ್ / lalita MP