ಗದಗ ಜಿಲ್ಲೆಯಲ್ಲಿ ಮನೆ ಮನೆಗೆ ಪೊಲೀಸ್‌ ಅಭಿಯಾನ
ಗದಗ, 01 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಸಮುದಾಯ ಪೊಲೀಸ್‌ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ “ಮನೆ ಮನೆಗೆ ಪೊಲೀಸ್‌” ಪರಿಕಲ್ಪನೆಯಡಿ ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಭಿಯಾನ ಜರುಗಿತು. ಈ ಸಂದರ್ಭದಲ್ಲಿ ಪೊಲೀಸರು ಮನೆ ಮನೆಗಳಿಗೆ ಭೇಟಿ ನೀಡಿ, ಕುಟು
ಪೋಟೋ


ಗದಗ, 01 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಸಮುದಾಯ ಪೊಲೀಸ್‌ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ “ಮನೆ ಮನೆಗೆ ಪೊಲೀಸ್‌” ಪರಿಕಲ್ಪನೆಯಡಿ ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಭಿಯಾನ ಜರುಗಿತು.

ಈ ಸಂದರ್ಭದಲ್ಲಿ ಪೊಲೀಸರು ಮನೆ ಮನೆಗಳಿಗೆ ಭೇಟಿ ನೀಡಿ, ಕುಟುಂಬ ಸದಸ್ಯರೊಂದಿಗೆ ಸಂವಾದ ನಡೆಸಿ ಅಗತ್ಯ ಮಾಹಿತಿಯನ್ನು ಪಡೆದುಕೊಂಡರು.

ಪೊಲೀಸ್‌ ಇಲಾಖೆಯ ಉದ್ದೇಶ, ಸಾರ್ವಜನಿಕರ ಸುರಕ್ಷತೆ ಹಾಗೂ ಸಮಸ್ಯೆಗಳ ತ್ವರಿತ ಪರಿಹಾರ ಸಾಧ್ಯತೆ ಬಗ್ಗೆ ಅರಿವು ಮೂಡಿಸಲಾಯಿತು. ಜನ-ಪೊಲೀಸ್‌ ನಂಬಿಕೆ ಬೆಳೆಸುವಲ್ಲಿ ಹಾಗೂ ಸಹಕಾರ ಬಲಪಡಿಸುವಲ್ಲಿ ಈ ಕಾರ್ಯಕ್ರಮ ಪೂರಕವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande