ನಾನಾ ಯೋಜನೆಗಳ ಸವಲತ್ತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಹಾಸನ, 01 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಜಾರಿಯಲ್ಲಿರುವ ಫಲಾನುಭವಿ ಅಧಾರಿತ ಯೋಜನೆಗಳು, ಕಾರ್ಯಕ್ರಮಗಳಡಿ ಸೌಲಭ್ಯ ಪಡೆಯಲು 2025-26ನೇ ಸಾಲಿನಲ್ಲಿ website: https://sevasindhu.karnataka.gov.in/Sevasindhu/Kannada Dಆನ್‌ಲೈನ್ ಮೂಲಕ
ನಾನಾ ಯೋಜನೆಗಳ ಸವಲತ್ತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ


ಹಾಸನ, 01 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಜಾರಿಯಲ್ಲಿರುವ ಫಲಾನುಭವಿ ಅಧಾರಿತ ಯೋಜನೆಗಳು, ಕಾರ್ಯಕ್ರಮಗಳಡಿ ಸೌಲಭ್ಯ ಪಡೆಯಲು 2025-26ನೇ ಸಾಲಿನಲ್ಲಿ website: https://sevasindhu.karnataka.gov.in/Sevasindhu/Kannada Dಆನ್‌ಲೈನ್ ಮೂಲಕ ಅರ್ಜಿಗಳನ್ನು ಸೆ.30 ರಂದು ನಿಗದಿಪಡಿಸಿದ ದಿನಾಂಕವನ್ನು ಅ.15 ರವರೆಗೆ ಅವಧಿ ವಿಸ್ತರಿಸಲಾಗಿದೆ. ಜಿಲ್ಲೆಯ ಅರ್ಹ ವಿಕಲಚೇತನರು ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಸದರಿ ದಿನಾಂಕದೊಳಗೆ ಈ ಕೆಳಕಂಡ ಯೋಜನೆ/ಕಾರ್ಯಕ್ರಮಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರತಿಭಾ ವಿಕಲಚೇತನ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ ಯೋಜನೆ, ಅಂಧ ಮಹಿಳೆಯರಿಗೆ ಜನಿಸಿದ ಮಗುವಿನ ಲಾಲನೆ, ಪೋಷಣೆಗಾಗಿ ಶಿಶುಪಾಲನಾ ಭತ್ಯೆ ನೀಡುವ ಯೋಜನೆ, ಸ್ವಯಂ ಉದ್ಯೋಗ ಕೈಗೊಳ್ಳಲು ಆಧಾರ ಯೋಜನೆಯಡಿ ಸಾಲಸೌಲಭ್ಯ ನೀಡುವುದು. ನಿರುದ್ಯೋಗಿ ವಿಕಲಚೇತನರಿಗೆ ನಿರುದ್ಯೋಗ ಭತ್ಯೆ ಅಂಗವಿಕಲತೆ ನಿವಾರಣಗಾಗಿ ವೈದ್ಯಕೀಯ ವೆಚ್ಚ ಭರಿಸಿದ ಬಾಬ್ತುನ್ನು ವೈದ್ಯಕೀಯ ಪರಿಹಾರ ನಿಧಿಯಡಿ ಮರುಪಾವತಿಸುವ ಯೋಜನೆ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಮರಣ ಪರಿಹಾರ ನಿಧಿ, ಪ್ರತಿಭೆ ಯೋಜನೆಯಡಿ ಸಹಾಯಧನ ನೀಡಲಾಗುವುದು.

ತೀವ್ರತರ ದೈಹಿಕ ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವೀಲ್‌ಚೇರ್‌ಗಳನ್ನು ನೀಡಲಾಗುವುದು. ತೀವ್ರತರ ದೈಹಿಕ ವಿಕಲಚೇತನ ವ್ಯಕ್ತಿಗಳಿಗೆ ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ನೀಡಲಾಗುವುದು. ಸ್ವಯಂ ಉದ್ಯೋಗ ಕೈಗೊಳ್ಳಲು ಶ್ರವಣದೋಷವುಳ್ಳ ವಿಕಲಚೇತನರಿಗೆ ಹೊಲಿಗೆ ಯಂತ್ರ ನೀಡಲಾಗುವುದು. 10ನೇ ತರಗತಿ ಹಾಗೂ ತದನಂತರ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡುವ ಯೋಜನೆ 10ನೇ ತರಗತಿ ಹಾಗೂ ತದನಂತರ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಬ್ರೆöÊಲ್ ಕಿಟ್ï ನೀಡುವ ಯೋಜನೆ, ಅರ್ಹ ವಿಕಲಚೇತನರಿಗೆ ಅವಶ್ಯವಿರುವ ಸಾಧನ ಸಲಕರಣೆಗಳ ವಿತರಣೆ ಯೋಜನೆ.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಸಂಬಂಧವಾಗಿ ಹಾಗೂ ಯೋಜನೆಗಳು, ಕಾರ್ಯಕ್ರಮಗಳ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, 9ನೇ ಕ್ರಾಸ್, ಶಂಕರಮಠ ರಸ್ತೆ, ಕೆ.ಆರ್.ಪುರಂ, ಹಾಸನ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ; 08172-264546/295546 ಹಾಗೂ ಸಂಬಂಧಪಟ್ಟ ತಾಲ್ಲೂಕಿನ ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande