ಚಿತ್ರದುರ್ಗ, 01 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜಯಂತಿಯನ್ನು ಅಕ್ಟೋಬರ್ 2ರಂದು ಜಿಲ್ಲಾ ಮಟ್ಟದಲ್ಲಿ ಭವ್ಯವಾಗಿ ಆಚರಿಸಲು ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ನಗರಸಭೆ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 9.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸಲಿದ್ದಾರೆ. ಸಂಸದ ಗೋವಿಂದ ಎಂ. ಕಾರಜೋಳ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಬೆಳಿಗ್ಗೆ 9ಕ್ಕೆ ಒನಕೆ ವೃತ್ತ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶ್ರಮದಾನ ಮತ್ತು ಸ್ವಚ್ಛತಾ ಪ್ರತಿಜ್ಞಾವಿಧಿ ನಡೆಯಲಿದೆ. ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa