ಮಡಿಕೇರಿ, 01 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ 156ನೇ ಜನ್ಮ ವರ್ಷಾಚರಣೆ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಅಕ್ಟೋಬರ್ 2ರಂದು ಬೆಳಿಗ್ಗೆ 10.30ಕ್ಕೆ ಮಡಿಕೇರಿ ಗಾಂಧಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿಕ್ಷಣ ಇಲಾಖೆಗಳು, ನಗರಸಭೆ, ಕನ್ನಡ ಸಾಹಿತ್ಯ ಪರಿಷತ್ತು, ಸರ್ವೋದಯ ಸಮಿತಿ, ಸ್ಕೌಟ್ಸ್ ಮತ್ತು ಗೈಡ್ಸ್, ಜಾನಪದ ಪರಿಷತ್ತು ಇತ್ಯಾದಿ ಸಂಸ್ಥೆಗಳು ಸಂಯುಕ್ತವಾಗಿ ಆಯೋಜಿಸಿವೆ.
ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು, ಶಾಸಕರಾದ ಡಾ. ಮಂತರ್ ಗೌಡ, ಎ.ಎಸ್. ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯ ಸಭಾ ಸದಸ್ಯ ಅಜಯ್ ಮಾಕನ್ ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa