ನಾಳೆ ಧಾರವಾಡ ಗಾಂಧಿ ಭವನದಲ್ಲಿ ಗಾಂಧೀಜಿ 156ನೇ ಜಯಂತಿ
ಧಾರವಾಡ, 01 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಮಹಾತ್ಮಾ ಗಾಂಧೀಜಿಯವರ 156ನೇ ಜಯಂತಿ ಅಂಗವಾಗಿ ಧಾರವಾಡ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಅ.2 ರಂದು ಬೆಳಿಗ್ಗೆ 9 ಗಂಟೆಗೆ ಧಾರವಾಡ ಗಾಂಧಿ ಭವನದಲ್ಲಿ ಏರ್ಪಡಿಸಲಾಗಿದೆ. ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಕಾರ್ಯಕ್ರಮವನ್ನು ಉದ್ಘ
ನಾಳೆ ಧಾರವಾಡ ಗಾಂಧಿ ಭವನದಲ್ಲಿ ಗಾಂಧೀಜಿ 156ನೇ ಜಯಂತಿ


ಧಾರವಾಡ, 01 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಮಹಾತ್ಮಾ ಗಾಂಧೀಜಿಯವರ 156ನೇ ಜಯಂತಿ ಅಂಗವಾಗಿ ಧಾರವಾಡ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಅ.2 ರಂದು ಬೆಳಿಗ್ಗೆ 9 ಗಂಟೆಗೆ ಧಾರವಾಡ ಗಾಂಧಿ ಭವನದಲ್ಲಿ ಏರ್ಪಡಿಸಲಾಗಿದೆ.

ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ.

ಗಾಂಧಿ ಚಿಂತಕ ಡಾ. ನಿತಿನ್‍ಚಂದ್ರ ಹತ್ತೀಕಾಳ ವಿಶೇಷ ಉಪನ್ಯಾಸ ನೀಡಲಿದ್ದಾರೆ. ವಿದ್ಯಾರ್ಥಿಗಳು, ಗಾಂಧಿ ಅನುಯಾಯಿಗಳು ಹಾಗೂ ನಾನಾ ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande