ಫಿಲಿಪೈನ್ಸ್ ಭೂಕಂಪ ; ಭಾರತೀಯ ರಾಯಭಾರ ಕಚೇರಿ ಸಂತಾಪ
ನವದೆಹಲಿ, 01 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಫಿಲಿಪೈನ್ಸ್‌ನ ಮಧ್ಯ ಸೆಬು ಪ್ರಾಂತ್ಯದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಕನಿಷ್ಠ 60 ಮಂದಿ ಸಾವನ್ನಪ್ಪಿ, 100 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಹಿನ್ನೆಲೆಯಲ್ಲಿ, ಅಲ್ಲಿ ಇರುವ ಭಾರತೀಯ ರಾಯಭಾರ ಕಚೇರಿ ತನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸಿದೆ. ರಾಯಭಾರ
ಫಿಲಿಪೈನ್ಸ್ ಭೂಕಂಪ ; ಭಾರತೀಯ ರಾಯಭಾರ ಕಚೇರಿ ಸಂತಾಪ


ನವದೆಹಲಿ, 01 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಫಿಲಿಪೈನ್ಸ್‌ನ ಮಧ್ಯ ಸೆಬು ಪ್ರಾಂತ್ಯದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಕನಿಷ್ಠ 60 ಮಂದಿ ಸಾವನ್ನಪ್ಪಿ, 100 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಹಿನ್ನೆಲೆಯಲ್ಲಿ, ಅಲ್ಲಿ ಇರುವ ಭಾರತೀಯ ರಾಯಭಾರ ಕಚೇರಿ ತನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸಿದೆ.

ರಾಯಭಾರ ಕಚೇರಿಯು ಸಾಮಾಜಿಕ ಜಾಲತಾಣ ಎಕ್ಸನಲ್ಲಿ, ಭೂಕಂಪದಿಂದ ಹಾನಿಗೊಳಗಾದ ಜನರಿಗೆ ಹಾಗೂ ಫಿಲಿಪೈನ್ಸ್ ಸರ್ಕಾರ ಮತ್ತು ನಾಗರಿಕರಿಗೆ ನಮ್ಮ ಆಳವಾದ ಸಂತಾಪಗಳು ಎಂದು ತಿಳಿಸಿದೆ.

ಮಂಗಳವಾರ ತಡರಾತ್ರಿ ಸಂಭವಿಸಿದ 6.9 ತೀವ್ರತೆಯ ಭೂಕಂಪ ಸ್ಥಳೀಯ ದೋಷರೇಖೆಯಿಂದ ಉಂಟಾಗಿದ್ದು, ವ್ಯಾಪಕ ಭೀತಿ ಉಂಟುಮಾಡಿತು. ಅನೇಕರು ಮನೆಗಳನ್ನು ತೆರವುಗೊಳಿಸಿದ್ದು ಮತ್ತು ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ.

ಪ್ರಸ್ತುತ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಮುಂದುವರೆದಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಆತಂಕವಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande