ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗಾಗಿ ಅರ್ಜಿ ಆಹ್ವಾನ
ಚಿತ್ರದುರ್ಗ, 01 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ 2025-26ನೇ ಸಾಲಿನಲ್ಲಿ ಕೃಷಿಯಲ್ಲಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆ ಆಧಾರದಲ್ಲಿ ಒದಗಿಸುವಂತೆ ಹಾಗೂ ಜಿಲ್ಲೆಯಲ್ಲಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲ ಪಡಿಸಲು ವೈಯಕ್ತಿಕ ಫಲಾನುಭವಿಗಳಿಗೆ ಸಾಮಾನ್ಯ
ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗಾಗಿ ಅರ್ಜಿ ಆಹ್ವಾನ


ಚಿತ್ರದುರ್ಗ, 01 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ 2025-26ನೇ ಸಾಲಿನಲ್ಲಿ ಕೃಷಿಯಲ್ಲಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆ ಆಧಾರದಲ್ಲಿ ಒದಗಿಸುವಂತೆ ಹಾಗೂ ಜಿಲ್ಲೆಯಲ್ಲಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲ ಪಡಿಸಲು ವೈಯಕ್ತಿಕ ಫಲಾನುಭವಿಗಳಿಗೆ ಸಾಮಾನ್ಯ ಹಾಗೂ ಪರಿಶಿಷ್ಟ ಜಾತಿಯ ರೈತರಿಂದ ಕಂಬೈನ್ಸ್ ಹಾರ್ವೆಸ್ಟರ್ ಹಬ್ ಸ್ಥಾಪನೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಸಾಮಾನ್ಯ ಘಟಕದಡಿ ವೈಯಕ್ತಿಕ ಫಲಾನುಭವಿಗಳಿಗೆ (ಎರಡು). ವಿಶೇಷ ಘಟಕ ಯೋಜನೆ ವರ್ಗದ ರೈತರಿಗೆ (ಒಂದು) ಘಟಕ ಸ್ಥಾಪನೆಗೆ ಅವಕಾಶ ಕಲ್ಪಿಸಲಾಗಿದೆ. ಈ ಯಂತ್ರಗಳನ್ನು ಬಾಡಿಗೆಗೆ ನೀಡುವ ಮೂಲಕ ರೈತರು ಹೆಚ್ಚುವರಿ ಆದಾಯ ಪಡೆಯಬಹುದಾಗಿದೆ. ಹೈಟೆಕ್ ಹಾರ್ವೆಸ್ಟರ್ ಹಬ್‍ಗಳನ್ನು ಬೆಳೆಯ ವಿಧ ಮತ್ತು ಕಟಾವು ಅವಧಿಯ ಆಧಾರದ ಮೇಲೆ ಕಾರಿಡರ್ ಮಾದರಿಯಲ್ಲಿ ಸ್ಥಾಪಿಸುವುದು. ಕೃಷಿ ಯಂತ್ರೋಪಕರಣವಾರು ನಿಗದಿಪಡಿಸಿದ ಗರಿಷ್ಠ ಸಹಾಯಧನವನ್ನು ಒದಗಿಸಲಾಗುವುದು. ಈ ಸಹಾಯಧನವನ್ನು ಕ್ರೆಡಿಟ್ ಲಿಂಕ್ಸ್ ಬ್ಯಾಕ್ ಎಂಡೆಡ್ ಸಬ್ಸಿಡಿ ಮೂಲಕ ಬಿಡುಗಡೆ ಮಾಡಲಾಗುವುದು. ಆಯ್ಕೆಯಾದ ಫಲಾನುಭವಿಗಳು ಕೃಷಿ ಮೂಲಭೂತ ಸೌಕರ್ಯ ನಿಧಿ ಸಾಲದ ನೆರವನ್ನು ಪಡೆಯಲು ಸಹ ಅವಕಾಶವಿದೆ.

ಅರ್ಜಿಗಳನ್ನು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಅಕ್ಟೋಬರ್ 8 ರೊಳಗಾಗಿ ಸಲ್ಲಿಸುವುದು. ಸಹಾಯಕ ಕೃಷಿ ನಿರ್ದೇಶಕರು ಸ್ವೀಕೃತವಾಗುವ ಎಲ್ಲ ಅರ್ಜಿಗಳನ್ನು ಮೇಲ್ಕಂಡ ಎಲ್ಲ ಅಂಶಗಳನ್ವಯ ಪರಿಶೀಲಿಸಿ ಸಂಬಂಧಿಸಿದ ಉಪ ಕೃಷಿ ನಿರ್ದೇಶಕರ ಮುಖಾಂತರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಸಮೀಪದ ರೈತ ಸಂಪರ್ಕ ಕೇಂದ್ರ. ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸುವಂತೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ಬಿ. ಮಂಜುನಾಥ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande