ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಬೆಂಗಳೂರು, 01 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2025-26ನೇ ಸಾಲಿನಲ್ಲಿ ವಿವಿಧ ಸಾಲ/ಸಹಾಯಧನ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತ ಸಮುದಾಯಗಳ (ಕ್ರಿಶ್ಚಿಯನ್ ಸಮುದಾಯ ಹೊರತುಪಡಿಸಿ) ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಯೋಜನೆಗಳಲ
ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ


ಬೆಂಗಳೂರು, 01 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2025-26ನೇ ಸಾಲಿನಲ್ಲಿ ವಿವಿಧ ಸಾಲ/ಸಹಾಯಧನ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತ ಸಮುದಾಯಗಳ (ಕ್ರಿಶ್ಚಿಯನ್ ಸಮುದಾಯ ಹೊರತುಪಡಿಸಿ) ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.

ಯೋಜನೆಗಳಲ್ಲಿ ಶ್ರಮ ಶಕ್ತಿ ಸಾಲ/ಸಹಾಯಧನ, ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮ, ಟ್ಯಾಕ್ಸಿ/ಗೂಡ್ಸ್ ವಾಹನ ಖರೀದಿ, ವೃತ್ತಿ ಪ್ರೋತ್ಸಾಹ ಸಾಲ/ಸಹಾಯಧನ, ಸಾಂತ್ವನ ಯೋಜನೆ, ವಿದೇಶ ವ್ಯಾಸಂಗಕ್ಕಾಗಿ ಸಾಲ, ಹಾಗೂ ನೇರ ಸಾಲ ಯೋಜನೆಗಳನ್ನು ಒಳಗೊಂಡಿವೆ.

ಆನ್‌ಲೈನ್ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಅಕ್ಟೋಬರ್ 16, 2025, ದಾಖಲೆಗಳೊಂದಿಗೆ ಪ್ರತಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 20, 2025.

ಹೆಚ್ಚಿನ ಮಾಹಿತಿಗಾಗಿ ನಿಗಮದ ಕಚೇರಿ (ಹಮೀದ್ ಷಾ ಕಾಂಪ್ಲೆಕ್ಸ್, ಹಲಸೂರು ಗೇಟ್, ಬೆಂಗಳೂರು) ಅಥವಾ ದೂರವಾಣಿ 080-22114817, ಸಹಾಯವಾಣಿ 8277799990 ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande