ಆರ್ ಎಸ್ಎಸ್ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಿ ಭಾಗಿ
ನವದೆಹಲಿ, 01 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿಶೇಷ ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಿದ್ದಾರೆ. ನವದೆಹಲಿಯ ಡಾ. ಅಂಬೇಡ್ಕರ್ ಅಂತರರಾಷ್ಟ
Pm


ನವದೆಹಲಿ, 01 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿಶೇಷ ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಿದ್ದಾರೆ.

ನವದೆಹಲಿಯ ಡಾ. ಅಂಬೇಡ್ಕರ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಪ್ರಧಾನಿ ಕಚೇರಿ ಪ್ರಕಟಣೆ ಬಿಡುಗಡೆ ಮಾಡಿದೆ.

ಡಾ. ಕೇಶವ ಬಲಿರಾಮ್ ಹೆಡ್ಗೆವಾರ್ ಅವರು 1925 ರ ವಿಜಯದಶಮಿಯಂದು ನಾಗ್ಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಸ್ಥಾಪಿಸಿದರು. ಸಂಘ ಸ್ಥಾಪನೆಯಾಗಿ ನೂರು ವರ್ಷ ಪೊರೈಸಿದ ಹಿನ್ನೆಲೆಯಲ್ಲಿ ದೇಶದಾದ್ಯಂತ ಸಂಘ ಶತಮಾನೋತ್ಸವ ಸಮಾರಂಭ ಆಚರಿಸುತ್ತಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande