ಚಿತ್ರದುರ್ಗ, 01 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಚಿತ್ರದುರ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಅರೇ ಕಾಲಿಕ ಕಾನೂನು ಸ್ವಯಂಸೇವಕರು ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಕ್ಟೋಬರ್ 8ರೊಳಗೆ ಅರ್ಜಿಗಳನ್ನು ಖುದ್ದಾಗಿ ಸಲ್ಲಿಸಬೇಕು.
ಶಿಕ್ಷಕರು, ಪ್ರಾಧ್ಯಾಪಕರು, ಪಂಚಾಯಿತಿ ಸದಸ್ಯರು, ನಿವೃತ್ತ ಸರ್ಕಾರಿ ನೌಕರರು, ಮಹಿಳೆಯರು, ಮಂಗಳಮುಖಿಯರು, ಅಲ್ಪಸಂಖ್ಯಾತರು, ಎಂಎಸ್‌ಡಬ್ಲ್ಯೂ ವಿದ್ಯಾರ್ಥಿಗಳು, ಕಾನೂನು ವಿದ್ಯಾಥಿಗಳು, ನಿವೃತ್ತ ಸೈನಿಕರು ಹಾಗೂ ಸಾಮಾಜಿಕ ಸೇವಾ ಮನೋಭಾವ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ.
ವೇತನವಿಲ್ಲದ ಈ ಸೇವೆಗೆ, ಪ್ರತಿ ಕೆಲಸದ ದಿನಕ್ಕೆ ಗರಿಷ್ಠ ರೂ.250 ಗೌರವಧನ ನೀಡಲಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa