ಗದಗ, 01 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಸಹಯೋಗದಲ್ಲಿ ಹಾಡಿರೇ ರಾಗಗಳ ತೂಗಿರೇ ದೀಪಗಳ ಸಾಂಸ್ಕೃತಿಕ ಕಾರ್ಯಕ್ರಮ-2025 ಅಕ್ಟೋಬರ್ 01 ಬುದುವಾರ ಸಾಯಂಕಾಲ 6:00 ಘಂಟೆಗೆ ಸರಕಾರಿ ಪ್ರೌಢಶಾಲೆ ಆವರಣ ಶ್ರೀ ದೊರೆಸ್ವಾಮಿ ವಿರಕ್ತಮಠ ಹತ್ತಿರ ಬೈನರಹಟ್ಟಿ ತಾಲೂಕು ನರಗುಂದ ಇಲ್ಲಿ ನಡೆಯಲಿದೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದೂಳಿದ ವರ್ಗಗಳ ಕಲ್ಯಾಣ ಸಚಿವರು ಶಿವರಾಜ ಎಸ್ ತಂಗಡಗಿ ಘನ ಉಪಸ್ಥಿತಿ ವಹಿಸುವರು
ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ನರಗುಂದ ಶಾಸಕ ಸಿ.ಸಿ ಪಾಟೀಲ್ ರವರು ಅಧ್ಯಕ್ಷತೆ ವಹಿಸುವರು
ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್ , ಕರ್ನಾಟಕ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್.ಪಾಟೀಲ, ಸಂಸದ ಪಿ.ಸಿ.ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್, ಶಿರಹಟ್ಟಿ ಶಾಸಕರಾದ ಡಾ.ಚಂದ್ರು ಲಮಾಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಬಿ.ಅಸೂಟಿ, ಬೈನರಹಟ್ಟಿ ಗ್ರಾಮ ಪಂಚಾಯತ್ ಅಧ್ಯಕ್ಷ ಶರಣಬಸಪ್ಪ ನರಸಾಪೂರ ಅವರುಗಳು ಆಗಮಿಸುವರು.
ಕರ್ನಾಟಕ ಯೋಜನೆ ಕಾರ್ಯಕ್ರಮ ಸಂಯೋಜನೆ ಮತು ಸಾಂಖ್ಯಿಕ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಸರ್ಕಾರದ ಕಾರ್ಯದರ್ಶಿಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಡಾ. ವೆಂಕಟೇಶ ಎಂ ವಿ, ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಶ್ರೀಮತಿ ಕೆ ಎಂ ಗಾಯತ್ರಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ ಜಗದೀಶ, ಅಪರ ಜಿಲ್ಲಾಧಿಕಾರಿ ಗದಗ ಡಾ. ದುರುಗೇಶ್ ಕೆ.ಆರ್, ಜಂಟಿ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ವಿಭಾಗ ಕೆ ಎಚ್ ಚೆನ್ನೂರು, ಕರ್ನಾಟಕ ಜಾನಪದ ಅಕಾಡೆಮೆ ಬೆಂಗಳೂರು ಶಂಕ್ರರಪ್ಪ ಆರ್ ಸಂಕಣ್ಣವರ, ಕರ್ನಾಟಕ ಸಾಹಿತ್ಯ ಅಕಾಡೆಮೆ ಬೆಂಗಳೂರು ಅರ್ಜುನ ಯ ಗೊಳಸಂಗಿ, ಕರ್ನಾಟಕ ಬಂಜಾರ ಅಕಾಡೆಮೆ ಬೆಂಗಳೂರು ಶ್ರೀಮತಿ ಸಾವಿತ್ರಿ ಮ ಲಮಾಣಿ, ಇವರು ವಿಶೇಷ ಆಹ್ವಾನಿತರು.
ಹಾಡಿರೇ ರಾಗಗಳ ತೂಗಿರೇ ದೀಪಗಳ ಸಾಂಸ್ಕೃತಿಕ ಕಾರ್ಯಕ್ರಮ - 2025 ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವವು, ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಡಾ. ಬಸವರಾಜ ವಿ ಬಳ್ಳಾರಿ ಸರ್ವರಿಗೂ ಸ್ವಾಗತ ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP