ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ : ಸಿದ್ದರಾಮಯ್ಯ
ನಿರ್ದಿಷ್ಟ
Cm


ಬೆಂಗಳೂರು, 01 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ ಜನರಲ್ಲಿ ಅನಕ್ಷರತೆ, ಬಡತನ, ಜಮೀನು ಇತ್ಯಾದಿಗಳಿಲ್ಲ ಎಂಬುದರ ಮಾಹಿತಿ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಜಾತಿ ಸಮೀಕ್ಷೆಯಿಂದ ಸಮಾಜದ ಉದ್ಧಾರ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವn ಹೆಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ಸಮೀಕ್ಷೆ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ತಿಳಿಸಿದಂತೆ ಅಸಮಾನತೆ ಹೋಗಲಾಡಿಸಲು ದುರ್ಬಲರು ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕು. ಸಮಾಜದಲ್ಲಿ ಅಸಮಾನತೆ ನಿರಂತರವಾಗಿರಬೇಕು ಎಂಬುದು ಬಿಜೆಪಿಯವರ ಬಯಕೆ. ನಿರ್ದಿಷ್ಟ ಜಾತಿಯೊಂದು ಉತ್ತುಂಗದಲ್ಲಿರಬೇಕೆಂದು ಬಿಜೆಪಿ ಬಯಸುತ್ತದೆ. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಹಾಗೂ ರಾಜ್ಯ ಸರ್ಕಾರದ ಒತ್ತಾಯದ ಮೇರೆಗೆ, ಕೇಂದ್ರ ಸರ್ಕಾರವೂ ಜಾತಿಗಣತಿ ನಡೆಸಲು ಮುಂದಾಗಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande