ಕೇಂದ್ರದಿಂದ ಪ್ರವಾಹ ಪರಿಹಾರ ಕೊಡಿಸಲಿ : ಮುಖ್ಯಮಂತ್ರಿ
ಬೆಂಗಳೂರು, 01 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಪ್ರವಾಹ ಪರಿಹಾರವನ್ನು ಕೇಂದ್ರದಿಂದ ಕೊಡಿಸುವುದಾಗಿ ನೀಡಿರುವ ಹೇಳಿಕೆ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕುಮಾರಸ್ವಾಮಿಯವರ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಆದರೆ
Cm


ಬೆಂಗಳೂರು, 01 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಪ್ರವಾಹ ಪರಿಹಾರವನ್ನು ಕೇಂದ್ರದಿಂದ ಕೊಡಿಸುವುದಾಗಿ ನೀಡಿರುವ ಹೇಳಿಕೆ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕುಮಾರಸ್ವಾಮಿಯವರ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಆದರೆ 2023ರಲ್ಲಿ ರಾಜ್ಯಕ್ಕೆ ಬರಗಾಲ ಬಂದಿದ್ದಾಗ, ಕೇಂದ್ರ ಸರ್ಕಾರ ಬರಪರಿಹಾರ ನೀಡದೇ, ಸುಪ್ರೀಂಕೋರ್ಟ್ ನ ಬಳಿ ಧಾವಿಸಿ, ಪರಿಹಾರ ತೆಗೆದುಕೊಳ್ಳುವಂತಾಯಿತು. ಪ್ರಸ್ತುತ ಕುಮಾರಸ್ವಾಮಿಯವರು ಪರಿಹಾರ ಕೊಡಿಸುವುದಾದರೆ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ರಾಜ್ಯದ ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ, ಉತ್ತರ ಕರ್ನಾಟಕದ ಸುಮಾರು 9 ಜಿಲ್ಲೆಗಳಲ್ಲಿ ಶೇ.95 ರಷ್ಟು ಪ್ರವಾಹ ಸಂಭವಿಸಿದೆ. ಬೆಳಗಾವಿ, ವಿಜಾಪುರ, ಬಾಗಲಕೋಟೆ, ಬೀದರ್, ಯಾದಗಿರಿ, ರಾಯಚೂರು,ಹುಬ್ಬಳ್ಳಿ ಧಾರವಾಡ, ಗದಗ ಜಿಲ್ಲೆಗಳಲ್ಲಿ ಪ್ರವಾಹ ಸಂಭವಿಸಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande