ನಾಳೆ ಅರಕಲಗೂಡು ದಸರಾ ಉತ್ಸವ
ಹಾಸನ, 01 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಹಾಸನ ಜಿಲ್ಲೆಯ ಅರಕಲಗೂಡು ದಸರಾ ಉತ್ಸವ–2025ರ ಕಾರ್ಯಕ್ರಮ ಅಕ್ಟೋಬರ್ 2ರಂದು ಮಧ್ಯಾಹ್ನ 4 ಗಂಟೆಗೆ ಅರಕಲಗೂಡು ದೊಡಮ್ಮ ದೇವಸ್ಥಾನದ ಆವರಣದಿಂದ ಬನ್ನಿ ಮಂಟಪದವರೆಗೆ ಜರುಗಲಿದೆ. ಈ ಸಂದರ್ಭದಲ್ಲಿ ವಿವಿಧ ಮಠಾಧೀಶರು ಹಾಗೂ ಧರ್ಮಗುರುಗಳು ದಿವ್ಯ ಸಾನಿಧ್ಯ ವಹಿಸಿ
ನಾಳೆ ಅರಕಲಗೂಡು ದಸರಾ ಉತ್ಸವ


ಹಾಸನ, 01 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಹಾಸನ ಜಿಲ್ಲೆಯ ಅರಕಲಗೂಡು ದಸರಾ ಉತ್ಸವ–2025ರ ಕಾರ್ಯಕ್ರಮ ಅಕ್ಟೋಬರ್ 2ರಂದು ಮಧ್ಯಾಹ್ನ 4 ಗಂಟೆಗೆ ಅರಕಲಗೂಡು ದೊಡಮ್ಮ ದೇವಸ್ಥಾನದ ಆವರಣದಿಂದ ಬನ್ನಿ ಮಂಟಪದವರೆಗೆ ಜರುಗಲಿದೆ.

ಈ ಸಂದರ್ಭದಲ್ಲಿ ವಿವಿಧ ಮಠಾಧೀಶರು ಹಾಗೂ ಧರ್ಮಗುರುಗಳು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಆದಿಚುಂಚನಗಿರಿ ಶಾಖಾ ಮಠಾಧೀಶ ಶ್ರೀ ಶಂಭುನಾಥ ಸ್ವಾಮೀಜಿ, ಅರೇಮಾದನಹಳ್ಳಿ ವಿಶ್ವಬ್ರಾಹ್ಮಣ ಮಹಾಸಂಸ್ಥಾನದ ಶ್ರೀ ಶಿವಸುಜ್ಞಾನತೀರ್ಥ ಸ್ವಾಮೀಜಿ, ಅರಕಲಗೂಡು ದೊಡ್ಡಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಚಿಲುಮೆ ಮಠದ ಶ್ರೀ ಜಯದೇವ ಸ್ವಾಮೀಜಿ, ಕೆಸವತ್ತೂರು ಸಿದ್ಧಲಿಂಗೇಶ್ವರ ಮಠದ ಶ್ರೀ ಬಸವರಾಜೇಂದ್ರ ಸ್ವಾಮೀಜಿ, ತೇಜೂರು ಸಿದ್ದರಾಮೇಶ್ವರ ಮಠದ ಶ್ರೀ ಕಲ್ಯಾಣ ಸ್ವಾಮೀಜಿ, ರಾಜಾಪುರ ಮಠದ ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ, ಶಿರಧನಹಳ್ಳಿ ಬಸವಲಿಂಗೇಶ್ವರ ಮಠದ ಶ್ರೀ ಸದಾಶಿವ ಸ್ವಾಮೀಜಿ ಸೇರಿದಂತೆ ಅರಕಲಗೂಡು ಮಸೀದಿಯ ಹಾಫೀಜ್ ನಯಾಜ್ ಅಹ್ಮದ್ ಹಾಗೂ ಕ್ರಿಸ್ತ ಸದನದ ಫಾ|| ಸೆಬಾಸ್ಟೀನ್ ಧರ್ಮಗುರುಗಳು ಪಾಲ್ಗೊಳ್ಳಲಿದ್ದಾರೆ‌ ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande