ಹಾಸನ, 01 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಹಾಸನ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲೆಯ ಎಲ್ಲಾ ಹಿರಿಯ ನಾಗರಿಕರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅ.04 ರಂದು ಬೆ.11 ಗಂಟೆಗೆ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಆಯೋಜಿಸಲಾಗಿದೆ.
ಮಾಜಿ ಪ್ರಧಾನ ಮಂತ್ರಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ.ದೇವೇಗೌಡ ಅವರು ಘನ ಉಪಸ್ಥಿತಿವಹಿಸಲಿದ್ದಾರೆ. ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಭೈರೇಗೌಡ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa