ಮಧ್ಯ ಪ್ರದೇಶದಲ್ಲಿ ಕೆಮ್ಮಿನ ಸಿರಪ್ ಪ್ರಕರಣ ; ಮಕ್ಕಳ ಸಾವಿನ ಸಂಖ್ಯೆ 23ಕ್ಕೆ ಏರಿಕೆ
ಚಿಂದ್ವಾರ, 10 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಮಧ್ಯ ಪ್ರದೇಶದಲ್ಲಿ ಕೋಲ್ಡ್ರಿಫ್ ಕೆಮ್ಮಿನ ಸಿರಪ್‌ ಸೇವನೆಯಿಂದ ಮೂತ್ರಪಿಂಡದ ಸೋಂಕಿನಿಂದ ಮೃತಪಟ್ಟ ಮಕ್ಕಳ ಸಾವಿನ ಸಂಖ್ಯೆ 23ಕ್ಕೆ ಏರಿದೆ. ಘಟನೆ ಕುರಿತು ತನಿಖೆ ಕೈಗೊಂಡಿರುವ ವಿಶೇಷ ತನಿಖಾ ತಂಡ ತಮಿಳುನಾಡು ಮೂಲದ ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಕಂ
Syrup


ಚಿಂದ್ವಾರ, 10 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಮಧ್ಯ ಪ್ರದೇಶದಲ್ಲಿ ಕೋಲ್ಡ್ರಿಫ್ ಕೆಮ್ಮಿನ ಸಿರಪ್‌ ಸೇವನೆಯಿಂದ ಮೂತ್ರಪಿಂಡದ ಸೋಂಕಿನಿಂದ ಮೃತಪಟ್ಟ ಮಕ್ಕಳ ಸಾವಿನ ಸಂಖ್ಯೆ 23ಕ್ಕೆ ಏರಿದೆ.

ಘಟನೆ ಕುರಿತು ತನಿಖೆ ಕೈಗೊಂಡಿರುವ ವಿಶೇಷ ತನಿಖಾ ತಂಡ ತಮಿಳುನಾಡು ಮೂಲದ ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾಲೀಕ ಜಿ. ರಂಗನಾಥನ್ ಅವರನ್ನು ಚೆನ್ನೈನಿಂದ ಬಂಧಿಸಿ, ಟ್ರಾನ್ಸಿಟ್ ರಿಮಾಂಡ್‌ನಲ್ಲಿ ಚಿಂದ್ವಾರಕ್ಕೆ ಕರೆತಂದಿದೆ. ಅವರು ಶುಕ್ರವಾರ ಪರಾಸಿಯಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಅಕ್ಟೋಬರ್ 5ರಂದು ಪರಾಸಿಯಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಮಧ್ಯಪ್ರದೇಶ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿತ್ತು. ಪ್ರಕರಣದ ತನಿಖೆ ಮುಂದುವರಿಯುತ್ತಿದ್ದು, ರಾಜ್ಯ ಸರ್ಕಾರ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಮಾರಾಟವನ್ನು ನಿಷೇಧಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande