ನವದೆಹಲಿ, 11 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಪಕ್ಷಗಳ ನಡುವೆ ಸೀಟು ಹಂಚಿಕೆ ಕುರಿತು ಚರ್ಚೆಗಳು ತೀವ್ರಗೊಂಡಿವೆ. ಶನಿವಾರ ಬೆಳಿಗ್ಗೆಯಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ನಿವಾಸದಲ್ಲಿ ಸರಣಿ ಸಭೆಗಳು ನಡೆದಿವೆ.
ಕೋರ್ ಕಮಿಟಿ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ಬಿಹಾರ ಉಸ್ತುವಾರಿ ವಿನೋದ್ ತಾವ್ಡೆ, ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಜೈಸ್ವಾಲ್ ಹಾಗೂ ಪ್ರಮುಖ ಬಿಹಾರ ನಾಯಕರೂ ಭಾಗವಹಿಸಿದ್ದರು. ನಂತರ ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಸೀಟು ಹಂಚಿಕೆ ಕುರಿತು ಪ್ರತ್ಯೇಕ ಚರ್ಚೆಗಳು ನಡೆದಿವೆ.
ಮಧ್ಯಾಹ್ನ ಹಿಂದೂಸ್ತಾನಿ ಅವಾಮ್ ಮೋರ್ಚಾ (ಹೆಚ್‌ಎಎಂ) ಮುಖ್ಯಸ್ಥ ಜಿತನ್ ರಾಮ್ ಮಾಂಝಿ ಅವರು ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ತಮ್ಮ ಪಕ್ಷದ ಬೇಡಿಕೆಗಳನ್ನು ಮಂಡಿಸಿದ್ದಾರೆ. ಇದೇ ವೇಳೆ ಉಪೇಂದ್ರ ಕುಶ್ವಾಹ ಮತ್ತು ಚಿರಾಗ್ ಪಾಸ್ವಾನ್ ಸಹ ದೆಹಲಿಯಲ್ಲಿ ಚಿಂತನ-ಮಂಥನ ಸಭೆ ನಡೆಸುತ್ತಿದ್ದಾರೆ.
ಬಿಹಾರ ಬಿಜೆಪಿ ಅಧ್ಯಕ್ಷ ದಿಲೀಪ್ ಜೈಸ್ವಾಲ್ ಅವರು ಸಭೆಗೆ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿ, “ಎನ್‌ಡಿಎ ಬಹಳ ಹಿಂದಿನಿಂದಲೂ ಅಚಲವಾದ ಒಗ್ಗಟ್ಟಿನಿಂದ ಮುಂದುವರೆದಿದೆ. ಸೀಟು ಹಂಚಿಕೆ ವಿಚಾರದಲ್ಲಿ ಎಲ್ಲವೂ ಅಂತಿಮಗೊಳ್ಳಲಿದೆ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa