ವಿಜಯಪುರ, 11 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲಾಡಳಿತ, ಜಿಲ್ಲಾಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬಿ.ಎಲ್.ಡಿ.ಇ ಅಸೋಸಿಯೇಶನ್ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯ ಹಾಸ್ಪಿಟಲ್ ಮತ್ತು ರಿಸರ್ಚ ಸೆಂಟರ್ ಹಾಗೂ ನೆಹರು ಯುವ ಕೇಂದ್ರ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತಾಶ್ರಯದಲ್ಲಿ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರವನ್ನು ಬಿ.ಎಲ್.ಡಿ.ಇ ಅಸೋಸಿಯೇಶನ್ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯದ ವಾಗ್ಭಟ ಸಭಾಂಗಣದಲ್ಲಿ ಅಕ್ಟೋಬರ್ 15ರಂದು ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 10.30ಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದು, ಶಾಸಕರಾದ ಬಸನಗೌಡ ಆರ್.ಪಾಟೀಲ (ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ ಎನ್., ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತ ಅಧ್ಯಕ್ಷರಾದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದ ರಮೇಶ ಜಿಗಜಿಣಗಿ, ಡಾ.ಸುಧಾ ಮೂರ್ತಿ, ಶಾಸಕರುಗಳಾದ ಯಶವಂತರಾಯಗೌಡ ವ್ಹಿ.ಪಾಟೀಲ, ಹಣಮಂತ ಆರ್.ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ವಿಠ್ಠಲ ಧೋಂಡಿಬಾ ಕಟಕದೊಂಡ, ಭೀಮನಗೌಡ (ರಾಜುಗೌಡ) ಬಸನಗೌಡ ಪಾಟೀಲ, ಅಶೋಕ ಮನಗೂಳಿ, ಕೇಶವಪ್ರಸಾದ ಎಸ್., ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮದ ಅಧ್ಯಕ್ಷೆ ಶ್ರೀಮತಿ ಕಾಂತಾ ನಾಯ್ಕ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಮಹಾನಗರ ಪಾಲಿಕೆ ಮಹಾಪೌರ ಮಡಿವಾಳಪ್ಪ ಕರಡಿ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಇಲಿಯಾಸ ಬೋರಾಮಣಿ, ಬಿಎಲ್‍ಡಿಇ ಅಸೋಸಿಯೇಶನ್ ಆರ್ಯುವೇದ ಮಹಾವಿದ್ಯಾಲಯದ ಪ್ರಾಂಶುಪಾಲ ಅಶೋಕ ಪಾಟೀಲ ಅವರು ಭಾಗವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande