ವಿಜಯಪುರ, 11 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.
ವಿಜಯಪುರ ತಾಲೂಕಿನ ಭುರಣಾಪೂರ ಗ್ರಾಮದ ಸುತ್ತಮುತ್ತಲಿನ ಭಾಗದಲ್ಲಿ ಭೂಕಂಪ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 2.6 ರಷ್ಟು ತೀವ್ರತೆ ದಾಖಲಾಗಿದೆ.
ಸೆಸ್ಮಿಕ್ ತೀವ್ರತೆಯ ನಕ್ಷೆಯ ಪ್ರಕಾರ, ಭೂಕಂಪನದ ತೀವ್ರತೆಯು ತುಂಬಾ ಕಡಿಮೆ ಇದೆ. ತೀವ್ರತೆ ಕಡಿಮೆ ಇರುವ ಹಿನ್ನೆಲೆಯಲ್ಲಿ ಈ ರೀತಿಯ ಭೂಕಂಪಗಳು ಜನವಸತಿಗೆ ಯಾವುದೇ ಹಾನಿಯನ್ನುಂಟುಮಾಡುವುದಿಲ್ಲ. ಆದರೂ ಕಂಪನಗಳನ್ನು ಜನ ಅನುಭವಿಸಿದ್ದಾರೆ ಎಂದು ತಿಳಿದು ಬಂದಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande