ಹರಿಯಾಣ ಐಪಿಎಸ್ ಅಧಿಕಾರಿ ಆತ್ಮಹತ್ಯೆ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಮಾಯಾವತಿ ಆಗ್ರಹ
ಲಕ್ನೋ, 11 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಹರಿಯಾಣದ ಐಪಿಎಸ್ ಅಧಿಕಾರಿ ವೈ. ಪೂರಣ್ ಕುಮಾರ್ ಅವರ ಆತ್ಮಹತ್ಯೆ ಪ್ರಕರಣದ ಕುರಿತು ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನಾಗರಿಕ ಸರ್ಕಾರಕ್ಕೆ ನಾಚಿಕೆಗೇಡಿನ ಸಂಗತಿ ಎಂದು ಅವರು ಖಂಡಿಸಿದ್ದಾರೆ. ಮಾಯಾವತಿ ಈ ಕುರ
ಹರಿಯಾಣ ಐಪಿಎಸ್ ಅಧಿಕಾರಿ ಆತ್ಮಹತ್ಯೆ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಮಾಯಾವತಿ ಆಗ್ರಹ


ಲಕ್ನೋ, 11 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಹರಿಯಾಣದ ಐಪಿಎಸ್ ಅಧಿಕಾರಿ ವೈ. ಪೂರಣ್ ಕುಮಾರ್ ಅವರ ಆತ್ಮಹತ್ಯೆ ಪ್ರಕರಣದ ಕುರಿತು ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನಾಗರಿಕ ಸರ್ಕಾರಕ್ಕೆ ನಾಚಿಕೆಗೇಡಿನ ಸಂಗತಿ ಎಂದು ಅವರು ಖಂಡಿಸಿದ್ದಾರೆ.

ಮಾಯಾವತಿ ಈ ಕುರಿತು ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯೆ ನೀಡಿದ್ದು, “ಜಾತಿ ಆಧಾರಿತ ಕಿರುಕುಳ ಮತ್ತು ದಬ್ಬಾಳಿಕೆಯು ಇಂದಿಗೂ ಆಡಳಿತ ವ್ಯವಸ್ಥೆಯಲ್ಲಿ ಮುಂದುವರೆದಿದೆ. ಸರ್ಕಾರಗಳು ಇದನ್ನು ತಡೆಯುವಲ್ಲಿ ವಿಫಲವಾಗಿವೆ. ಈ ಪ್ರಕರಣದಲ್ಲಿ ನಿಷ್ಪಕ್ಷಪಾತ ಹಾಗೂ ಸ್ವತಂತ್ರ ತನಿಖೆ ನಡೆಯಬೇಕು ಮತ್ತು ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು,” ಎಂದು ಆಗ್ರಹಿಸಿದ್ದಾರೆ.

ಐಜಿ ಹುದ್ದೆಯ ಅಧಿಕಾರಿಯಾಗಿದ್ದ ಪೂರಣ್ ಕುಮಾರ್ ಅವರ ಪತ್ನಿ ಐಎಎಸ್ ಅಧಿಕಾರಿ ಎಂಬ ಸಂಗತಿಯನ್ನು ಉಲ್ಲೇಖಿಸಿದ ಅವರು, “ಈ ಘಟನೆ ಇಡೀ ರಾಷ್ಟ್ರವನ್ನು ಆಘಾತಗೊಳಿಸಿದೆ. ದಲಿತರು ಮತ್ತು ಬಹುಜನ ಸಮಾಜದ ಜನರಲ್ಲಿ ಆಕ್ರೋಶ ಉಂಟಾಗಿದೆ,” ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande