ವಿಜಯಪುರ, 11 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಅಕ್ಟೋಬರ್ ೧೫ ರಂದು ಬೆಳಗ್ಗೆ ೯:೩೦ಕ್ಕೆ ಬಾಗಲಕೋಟೆಯ ನವನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜು ಸೆಕ್ಟರ್ ನಂ.೪೩ ರಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನೆಹರೂ ಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸಲಾಗುತ್ತಿದೆ.
೧೫ ರಿಂದ ೨೯ ವರ್ಷದ ಯುವಕರು ಹಾಗೂ ಯುವತಿಯರಿಗಾಗಿ ಜನಪದ ನೃತ್ಯ, ಜನಪದ ಗೀತೆ, ಕಥೆ ಬರೆಯುವುದು, ಚಿತ್ರಕಲೆ, ಘೋಷÀಣೆ, ಕವಿತೆ ಬರೆಯುವುದು ಮತ್ತು ವಿಜ್ಞಾನ ಮೇಳ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆಯಲಿವೆ. ವಿಜೇತರಿಗೆ ನಗದು ಬಹುಮಾನ ನೀಡಿ, ಪ್ರಥಮ ಸ್ಥಾನ ಪಡೆದವರನ್ನು ರಾಜ್ಯ ಮಟ್ಟದ ಯುವಜನೋತ್ಸವಕ್ಕೆ ಆಯ್ಕೆ ಮಾಡಲಾಗುತ್ತದೆ. ಸ್ಪರ್ಧಾಳುಗಳಿಗೆ ಊಟ ಮತ್ತು ಉಪಹಾರದ ವ್ಯವಸ್ಥೆ ಮಾಡಲಾಗಿದೆ.
ಭಾಗವಹಿಸುವವರು ನೊಂದಣಿಯ ವೇಳೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಹಾಜರುಪಡಿಸಬೇಕು. ಹೆಚ್ಚಿನ ಮಾಹಿತಿಗಾಗಿ ೦೮೩೫೪-೨೩೫೮೯೬, ೯೯೪೫೨೮೪೭೭೧ ಅಥವಾ ೯೭೩೧೩೫೨೫೨೪ ಸಂಖ್ಯೆಗೆ ಸಂಪರ್ಕಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande