ಬೆಂಗಳೂರು, 12 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಹಾಗೂ ವಿಜಯದಶಮಿ ಅಂಗವಾಗಿ ಬೆಂಗಳೂರಿನಲ್ಲಿ ನಡೆದ ಪಥಸಂಚಲನದಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ ಭಾಗವಹಿಸಿದ್ದರು.
ಪದ್ಮನಾಭನಗರ ವಿಧಾನ ಸಭಾ ಕ್ಷೇತ್ರದ ಚಿಕ್ಕಲಸಂದ್ರ ವಾರ್ಡ್ ನಲ್ಲಿ ಹನುಮಗಿರಿ ಭಾಗದ ವತಿಯಿಂದ ಆಯೋಜಿಸಿದ್ದ ಪಥಸಂಚಲನದಲ್ಲಿ ಗಣವೇಷಧಾರಿಯಾಗಿ ಭಾಗವಹಿಸಿದರು.
ಈ ಕುರಿತು ಸಂದೇಶ ಹಂಚಿಕೊಂಡಿರುವ ಅವರು ರಾಷ್ಟ್ರಹಿತ, ಶಿಸ್ತು, ತ್ಯಾಗ ಮತ್ತು ಸಮರ್ಪಣೆಯ ಈ ಶತಮಾನ ಪ್ರಯಾಣವು ಭಾರತೀಯ ಸಮಾಜದ ದಿಕ್ಕನ್ನೇ ಬದಲಾಯಿಸಿದ ಐತಿಹಾಸಿಕ ಅಧ್ಯಾಯ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa