ನವದೆಹಲಿ, 12 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ ಬಿಡುಗಡೆ ಮಾಡಿದೆ.
ಭಾನುವಾರ ಬಿಡುಗಡೆಯಾದ ಪಟ್ಟಿಯಲ್ಲಿ ಗುಲಾಮ್ ಮೊಹಮ್ಮದ್ ಮಿರ್, ರಾಕೇಶ್ ಮಹಾಜನ್ ಮತ್ತು ಶತ್ ಶರ್ಮಾ ಎಂಬ ಮೂವರು ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ.
ಶತ್ ಶರ್ಮಾ ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿಯ ರಾಜ್ಯ ಘಟಕದ ಮುಖ್ಯಸ್ಥರಾಗಿದ್ದು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.
ಬಿಜೆಪಿಯು ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್‌ನ ಆಡಳಿತ ಮೈತ್ರಿಕೂಟಕ್ಕಿಂತ ಸಂಖ್ಯೆಯಲ್ಲಿ ಹೆಚ್ಚಿನ ಮುನ್ನಡೆಯನ್ನು ಹೊಂದಿದೆ.
ಶರ್ಮಾ ಸ್ಪರ್ಧಿಸುವ ಸ್ಥಾನದಲ್ಲಿ, ಬಿಜೆಪಿ 28 ಮತಗಳನ್ನು ಹೊಂದಿದ್ದರೆ, ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟವು 24 ಮತಗಳನ್ನು ಹೊಂದಿದೆ. ಈ ಸ್ಥಾನಗಳಿಗೆ ಅಕ್ಟೋಬರ್ 24 ರಂದು ಚುನಾವಣೆ ನಡೆಯಲಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa