ಹಾವೇರಿ, 12 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಹಾವೇರಿ ಜಿಲ್ಲೆಯ ಬಂಕಾಪುರ ಗಣೇಶನ ವಿಸರ್ಜನೆ ಸಂಪ್ರದಾಯದಂತೆ ನಡೆಯಬೇಕು ಎನ್ನುವುದು ಬಂಕಾಪುರ ಜನತೆಯ ಆಶಯವಾಗಿತ್ತು. ಪೊಲಿಸರು ಹಾಗೂ ಜನರ ಸಹಕಾರದಿಂದ ಸೌಹಾರ್ದಯುತವಾಗಿ ಗಣೇಶನ ವಿಸರ್ಜನೆ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಬಂಕಾಪೂರ ಪಟ್ಟಣದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸಿ, ಚಾಲನೆಯನ್ನು ನೀಡಿದರು.
ಹುಬ್ಬಳ್ಳಿ ಧಾರವಾಡ ಸೇರಿದಂತೆ ಬೇರೆ ಕಡೆಗಳಲ್ಲಿ ಗಣೇಶ ವಿಸರ್ಜನೆಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ. ಹಾವೇರಿಯಲ್ಲಿ ಅನಗತ್ಯ ಆದೇಶಗಳನ್ನು ಮಾಡಿದ್ದರಿಂದ ಪೊಲೀಸರಿಗೂ ಕಷ್ಟವಾಗಿತ್ತು. ಈಗ ಅವರೂ ಸಹಕಾರ ಮಾಡಿದ್ದಾರೆ, ನಾವೂ ಸಹಕಾರ ಮಾಡಿದ್ದೇವೆ. ಹೀಗಾಗಿ ಗಣೇಶನ ವಿಸರ್ಜನೆ ಭಕ್ತಿ ಭಾವದಿಂದ ಸೌಹಾರ್ದತೆಯಿಂದ ನಡೆದಿದೆ. ಹೀಗಾಗಿ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa