ಕೆನಡಾದ ವಿದೇಶಾಂಗ ಸಚಿವೆ ಅನಿತಾ ಆನಂದ್ ಭಾರತ ಭೇಟಿ
ನವದೆಹಲಿ, 12 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಭಾರತ ಮತ್ತು ಕೆನಡಾ ನಡುವಿನ ಅಸಮಾಧಾನದ ಹಂತದ ನಂತರ, ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳು ಮತ್ತೆ ಚೇತರಿಸಿಕೊಳ್ಳುವ ನಿರೀಕ್ಷೆ ಮೂಡಿದೆ. ಈ ಹಿನ್ನೆಲೆಯಲ್ಲಿ ಕೆನಡಾದ ನೂತನ ವಿದೇಶಾಂಗ ಸಚಿವೆ ಅನಿತಾ ಆನಂದ್ ಇಂದು ನವದೆಹಲಿಗೆ ಆಗಮಿಸಿದ್ದಾರೆ.
Visit


ನವದೆಹಲಿ, 12 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಭಾರತ ಮತ್ತು ಕೆನಡಾ ನಡುವಿನ ಅಸಮಾಧಾನದ ಹಂತದ ನಂತರ, ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳು ಮತ್ತೆ ಚೇತರಿಸಿಕೊಳ್ಳುವ ನಿರೀಕ್ಷೆ ಮೂಡಿದೆ. ಈ ಹಿನ್ನೆಲೆಯಲ್ಲಿ ಕೆನಡಾದ ನೂತನ ವಿದೇಶಾಂಗ ಸಚಿವೆ ಅನಿತಾ ಆನಂದ್ ಇಂದು ನವದೆಹಲಿಗೆ ಆಗಮಿಸಿದ್ದಾರೆ.

ಅನಿತಾ ಆನಂದ್ ಅವರ ಮೂರು ರಾಷ್ಟ್ರಗಳ ಏಷ್ಯಾ ಪ್ರವಾಸದಲ್ಲಿ ಭಾರತಕ್ಕೆ ಮೊದಲ ಭೇಟಿಯಾಗಿದೆ , ಬಳಿಕ ಅವರು ಸಿಂಗಾಪುರ ಮತ್ತು ಚೀನಾಕ್ಕೆ ತೆರಳಲಿದ್ದಾರೆ. ದೆಹಲಿಯಲ್ಲಿ ಅವರು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗಿ, ವ್ಯಾಪಾರ, ಇಂಧನ ಮತ್ತು ಭದ್ರತೆ ಕ್ಷೇತ್ರಗಳಲ್ಲಿ ಕಾರ್ಯತಂತ್ರದ ಸಹಕಾರದ ಹೊಸ ಚೌಕಟ್ಟು ರೂಪಿಸುವ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಅನಿತಾ ಆನಂದ್ ಮುಂಬೈಗೂ ಭೇಟಿ ನೀಡಲಿದ್ದು, ಅಲ್ಲಿ ಭಾರತ-ಕೆನಡಾ ವ್ಯವಹಾರ ಹೂಡಿಕೆ ಮತ್ತು ಉದ್ಯೋಗಾವಕಾಶಗಳ ವಿಸ್ತರಣೆ ಕುರಿತು ಉದ್ಯಮಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಕೆನಡಾದ ಹಿಂದೂ ಮೂಲದ ದಂಪತಿಗಳ ಪುತ್ರಿಯಾಗಿರುವ ಅನಿತಾ ಆನಂದ್ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದು, ಇತ್ತೀಚೆಗೆ ಪ್ರಧಾನಿ ಮಾರ್ಕ್ ಕಾರ್ನಿ ಅವರ ನೂತನ ಸಂಪುಟದಲ್ಲಿ ವಿದೇಶಾಂಗ ಸಚಿವೆ ಆಗಿ ನೇಮಕಗೊಂಡಿದ್ದಾರೆ. ಅವರು ಹಿಂದಿನ ಸರಕಾರಗಳಲ್ಲಿ ರಕ್ಷಣಾ ಹಾಗೂ ಸಾರಿಗೆ ಸಚಿವೆ ಆಗಿ ಸೇವೆ ಸಲ್ಲಿಸಿದ್ದಾರೆ.

ಸೆಪ್ಟೆಂಬರ್ 2023ರಲ್ಲಿ, ಮಾಜಿ ಪ್ರಧಾನಿ ಜಸ್ಟಿನ್ ಟ್ರುಡೊ ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಭಾಗಿಯಾಗಿದೆ ಎಂದು ಆರೋಪಿಸಿದ ನಂತರ ಎರಡೂ ದೇಶಗಳ ಸಂಬಂಧ ಹದಗೆಟ್ಟಿತ್ತು. ಭಾರತವು ಆ ಆರೋಪಗಳನ್ನು ತೀವ್ರವಾಗಿ ತಳ್ಳಿಹಾಕಿತ್ತು. ಟ್ರುಡೊ ಅವರ ಪತನದ ನಂತರ, ಹೊಸ ಆಡಳಿತದೊಂದಿಗೆ ಸಂಬಂಧ ಪುನರುಜ್ಜೀವನಗೊಳ್ಳುವ ಭರವಸೆ ಇದೀಗ ಕಾಣುತ್ತಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande