ಬೆಂಗಳೂರು, 12 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬಿಜೆಪಿ ಶಾಸಕ ಮುನಿರತ್ನ ಮೇಲೆ ಜೆಪಿ ಪಾರ್ಕ್‌ನಲ್ಲಿ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುನಿರತ್ನ ಮೇಲಿನ ಹಲ್ಲೆಯನ್ನ ಖಂಡಿಸುತ್ತೇನೆ. ಸರ್ಕಾರದ ಕಾರ್ಯಕ್ರಮದಲ್ಲಿ ಶಾಸಕರಿಗೆ ಗೌರವ ಕೊಟ್ಟಿಲ್ಲ. ಇವರ ದಬ್ಬಾಳಿಕೆ ಬಹಳ ದಿನ ನಡೆಯುವುದಿಲ್ಲ, ಜನ ಇವರಿಗೆ ಪಾಠ ಕಲಿಸುತ್ತಾರೆ ಎಂದು ಅಶೋಕ್ ಕಿಡಿಕಾರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa