ದುರ್ಗಾಪುರ ಸಾಮೂಹಿಕ ಅತ್ಯಾಚಾರ ; ಮಮತಾ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆಗೆ ಖಂಡನೆ
ಕೋಲ್ಕತ್ತಾ, 12 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಒಡಿಶಾದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೀಡಿದ ಹೇಳಿಕೆ ವಿವಾದ ಸೃಷ್ಟಿಸಿದೆ. “ಬಂಗಾಳಕ್ಕೆ ಬರುವ ಇತರ ರಾಜ್ಯಗಳ ಹುಡುಗಿಯರು ತಡರಾತ್ರಿ ಹ
Mamata


ಕೋಲ್ಕತ್ತಾ, 12 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಒಡಿಶಾದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೀಡಿದ ಹೇಳಿಕೆ ವಿವಾದ ಸೃಷ್ಟಿಸಿದೆ.

“ಬಂಗಾಳಕ್ಕೆ ಬರುವ ಇತರ ರಾಜ್ಯಗಳ ಹುಡುಗಿಯರು ತಡರಾತ್ರಿ ಹೊರಗೆ ಹೋಗಬಾರದು, ಹಾಸ್ಟೆಲ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು,” ಎಂಬ ಅವರ ಹೇಳಿಕೆ ಪ್ರತಿ ಪಕ್ಷಗಳು ಮತ್ತು ಮಹಿಳಾ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ಮಮತಾ ಬ್ಯಾನರ್ಜಿ ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆ, “ಅಪರಾಧಿಗಳಿಗೆ ಯಾವುದೇ ರಿಯಾಯಿತಿ ಇಲ್ಲ. ಮೂವರನ್ನು ಬಂಧಿಸಲಾಗಿದೆ, ಉಳಿದವರಿಗಾಗಿ ಹುಡುಕಾಟ ಮುಂದುವರೆದಿದೆ,” ಎಂದು ಹೇಳಿದರು. ಆದರೆ ಹುಡುಗಿಯರು ತಡರಾತ್ರಿ ಹೊರಗೆ ಹೋಗಬಾರದು ಎಂಬ ಅವರ ಸಲಹೆ ಸಾಮಾಜಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ.

ಈ ಕುರಿತು ಬಿಜೆಪಿ ನಾಯಕ ರಾಹುಲ್ ಸಿನ್ಹಾ ಹೇಳಿಕೆ ನೀಡಿದ್ದು ಸರ್ಕಾರ ಮಹಿಳೆಯರ ಸುರಕ್ಷತೆ ಖಚಿತಪಡಿಸಿಕೊಳ್ಳುವಲ್ಲಿ ವಿಫಲವಾಗಿದೆ. ಮುಖ್ಯಮಂತ್ರಿಯ ಹೇಳಿಕೆ ಅಸಂಗತ ಮತ್ತು ಅವಮಾನಕಾರಿ,” ಎಂದು ಆರೋಪಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande