`ಇಂದಿರಾ ಕಿಟ್' ಸ್ವಾಗತಾರ್ಹ
ಬಳ್ಳಾರಿ, 12 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಸರ್ಕಾರ ಗ್ಯಾರಂಟಿಗಳನ್ನು ನೀಡಿ ಯಶಸ್ವಿಯಾಗಿ ಆಡಳಿತ ನೀಡುತ್ತಿದ್ದು `ಇಂದಿರಾ ಕಿಟ್'' ನೀಡುವ ಮೂಲಕ ಬಡ ಮತ್ತು ಮಧ್ಯಮ ವರ್ಗದ ಬಿಪಿಎಲ್ ಕಾರ್ಡ್‍ದಾರರಿಗೆ ನೆರವಾಗುತ್ತಿದೆ ಎಂದು ಕೆಪಿಸಿಸಿ ರಾಜ್ಯ ಮಾಧ್ಯಮ ವಕ್ತಾರರು ಹಾಗೂ ಕೆಪಿಸಿಸಿ
`ಇಂದಿರಾ ಕಿಟ್' ಸ್ವಾಗತಾರ್ಹ


ಬಳ್ಳಾರಿ, 12 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಸರ್ಕಾರ ಗ್ಯಾರಂಟಿಗಳನ್ನು ನೀಡಿ ಯಶಸ್ವಿಯಾಗಿ ಆಡಳಿತ ನೀಡುತ್ತಿದ್ದು `ಇಂದಿರಾ ಕಿಟ್' ನೀಡುವ ಮೂಲಕ ಬಡ ಮತ್ತು ಮಧ್ಯಮ ವರ್ಗದ ಬಿಪಿಎಲ್ ಕಾರ್ಡ್‍ದಾರರಿಗೆ ನೆರವಾಗುತ್ತಿದೆ ಎಂದು ಕೆಪಿಸಿಸಿ ರಾಜ್ಯ ಮಾಧ್ಯಮ ವಕ್ತಾರರು ಹಾಗೂ ಕೆಪಿಸಿಸಿ ರಾಜ್ಯ ಸಂಯೋಜಕರು ಪ್ರಚಾರ ಸಮಿತಿ ಸದಸ್ಯ ವೆಂಕಟೇಶ್ ಹೆಗಡೆ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿರುವ ಅವರು, 10 ಕೆಜಿ ಅಕ್ಕಿ ನೀಡುವುದರಿಂದ ನೆಮ್ಮದಿಯ ಜೀವನ ಸಾಧ್ಯವಿಲ್ಲ. ಕಾರಣ 5 ಕೆಜಿ ಅಕ್ಕಿ, 5 ಕೆಜಿ ಅಕ್ಕಿ ಬದಲು 1 ಕೆಜಿ ತೊಗರಿ, 1 ಕೆಜಿ ತೊಗರಿ ಬೇಳೆ, ಒಂದು ಕೆಜಿ ಎಣ್ಣೆ, ಒಂದು ಕೆಜಿ ಉಪ್ಪು ನೀಡಿ `ಇಂದಿರಾ ಕಿಟ್' ನೀಡುತ್ತಿರುವುದು ಉತ್ತಮವಾದ ಚಿಂತನೆಯಾಗಿದೆ ಎಂದರು.

ಈ ಮೂಲಕ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಪ್ಪಿಸಲು ಸರ್ಕಾರ ದಿಟ್ಟ ಹೆಜ್ಜೆಯನ್ನು ಇರಿಸಿದೆ ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande