ಭಾರತೀಯ ತೋಟಗಾರಿಕಾ ಸಂಶೋಧನಾ ಕೇಂದ್ರದಲ್ಲಿ ನೇರ ಪ್ರಸಾರ ಕಾರ್ಯಕ್ರಮ
ಭಾರತೀಯ ತೋಟಗಾರಿಕಾ ಸಂಶೋಧನಾ ಕೇಂದ್ರದಲ್ಲಿ ನೇರ ಪ್ರಸಾರ ಕಾರ್ಯಕ್ರಮ
ಭಾರತೀಯ ತೋಟಗಾರಿಕಾ ಸಂಶೋಧನಾ ಕೇಂದ್ರದಲ್ಲಿ ನೇರ ಪ್ರಸಾರ ಕಾರ್ಯಕ್ರಮ


A Special Krishi Programme


ಬೆಂಗಳೂರು, 12 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದಿನಾಂಕ 11ನೇ ಅಕ್ಟೋಬರ್ 2025 ರಂದು ಸುಮಾರು 42,000 ಕೋಟಿಗೂ ಅಧಿಕ ಮೊತ್ತದ ಕೃಷಿ ಕಾರ್ಯಕ್ರಮಗಳನ್ನು ದೇಶದ ಅನ್ನದಾತರ ಕಲ್ಯಾಣಕ್ಕಾಗಿ ಸಮರ್ಪಿಸಿದ ಕಾರ್ಯಕ್ರಮದ ನೇರ ಪ್ರಸಾರವನ್ನು ಭಾರತೀಯ ತೋಟಗಾರಿಕಾ ಸಂಶೋಧನಾ ಕೇಂದ್ರದಲ್ಲಿ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ, ಪ್ರಧಾನ ಮಂತ್ರಿ ಧನ ಧಾನ್ಯ ಯೋಜನೆ , ದ್ವಿದಳ ಧಾನ್ಯ ಉತ್ಪಾದನೆಯಲ್ಲಿ ಸ್ವಾವಲಂಬನೆ, ಕೃಷಿ ಮೂಲಸೌಕರ್ಯ ನಿಧಿ, ಪಶು ಸಂಗೋಪನೆ , ಮೀನುಗಾರಿಕೆ ಮತ್ತು ಆಹಾರ ಸಂಸ್ಕರಣ ವಲಯದಲ್ಲಿ ಭಾರತ ಸರ್ಕಾರವು ಕೈಗೊಂಡಿರುವ ಕಾರ್ಯಕ್ರಮಗಳ ಬಗೆಗೆ ಜಾಗೃತಿ ಮೂಡಿಸಲಾಯಿತು.

ನಂತರದ ಕಾರ್ಯಕ್ರಮದಲ್ಲಿ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯಲ್ಲಿ ಅಭಿವೃದ್ಧಿಪಡಿಸಿರುವ ಅರ್ಕ ಬೀಜ ಪೊಟ್ಟಣಗಳು, ಅರ್ಕ ಸೂಕ್ಷ್ಮಾಣು ಜೀವಿ ಮಿಶ್ರಣ ಹಾಗೂ ಹಣ್ಣಿನ ಸಸಿಗಳನ್ನು ಒಳಗೊಂಡ ಕೃಷಿಗೆ ಉಪಯೋಗವಾಗುವ ಸಲಕರಣೆಗಳನ್ನು ಭಾಗವಹಿಸಿದ್ದ ರೈತರಿಗೆ ವಿತರಿಸಲಾಯಿತು.

ತದನಂತರ ರೈತ ಬಾಂಧವರು ಸಂಸ್ಥೆಯ ಸಂಶೋಧನಾ ತಾಲಕುಗಳು, ಸಸ್ಯ ಕ್ಷೇತ್ರ ಹಾಗೂ ಕೃಷಿ ಇಂಜಿನಿಯರಿಂಗ್ ವಿಭಾಗಕ್ಕೆ ಭೇಟಿ ನೀಡಿ ಸಂಸ್ಥೆಯಲ್ಲಿ ಹೊಸದಾಗಿ ಅಭಿವೃದ್ಧಿಪಡಿಸಿರುವ ತಳಿಗಳು, ತಂತ್ರಜ್ಞಾನಗಳು ಹಾಗೂ ತೋಟಗಾರಿಕೆಗೆ ಸಂಬಂಧಪಟ್ಟ ಕೃಷಿ ಉಪಕರಣಗಳ ಬಗೆಗೆ ಮಾಹಿತಿ ಪಡೆದುಕೊಂಡರು.

ಸಂಸ್ಥೆಯ ನಿರ್ದೇಶಕರಾದ ಡಾಕ್ಟರ್ ತುಷಾರ್ ಕಾಂತಿ ಬೆಹರಾ ಹಾಗೂ ಇತರ ಹಿರಿಯ ವಿಜ್ಞಾನಿಗಳ ತಂಡ ಕರ್ನಾಟಕದ ಮಹತ್ವಕಾಂಕ್ಷಿ ಜಿಲ್ಲೆಗಳಾದ ತುಮಕೂರು ಹಾಗೂ ಚಿಕ್ಕಬಳ್ಳಾಪುರದಿಂದ ಬಂದಿದ್ದ ಸುಮಾರು 250ಕ್ಕೂ ಹೆಚ್ಚು ರೈತರೊಂದಿಗೆ ಸಂವಾದ ನಡೆಸಿದರು

ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ


 rajesh pande