ಅ.17 ರಂದು ಕೊಪ್ಪಳ ಜಿಲ್ಲಾ ಮಟ್ಟದ ಯುವಜನೋತ್ಸವ
ಕೊಪ್ಪಳ, 12 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26ನೇ ಸಾಲಿನ ಕೊಪ್ಪಳ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಅಕ್ಟೋಬರ್ 17 ರಂದು ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ 1
ಅ.17 ರಂದು ಕೊಪ್ಪಳ ಜಿಲ್ಲಾ ಮಟ್ಟದ ಯುವಜನೋತ್ಸವ


ಕೊಪ್ಪಳ, 12 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26ನೇ ಸಾಲಿನ ಕೊಪ್ಪಳ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಅಕ್ಟೋಬರ್ 17 ರಂದು ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ 15 ರಿಂದ 29 ವರ್ಷ ವಯೋಮಾನದೊಳಗಿನ ಯುವಜನರು ಭಾಗವಹಿಸಲು ಅವಕಾಶವಿರುತ್ತದೆ.

ಕೇಂದ್ರ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಮಂತ್ರಾಲಯವು ರಾಷ್ಟç ಮಟ್ಟದ ಯುವಜನೋತ್ಸವವನ್ನು ಪ್ರತಿ ವರ್ಷ ಜನವರಿ 12 ರಿಂದ 16ರ ವರೆಗೆ ಆಯೋಜಿಸಲಾಗುತ್ತದೆ.

ಈ ಕಾರ್ಯಕ್ರಮಕ್ಕೆ ಕರ್ನಾಟಕ ವಿಜೇತ ಸ್ಪರ್ಧಾಳುಗಳ ತಂಡವನ್ನು ಕಳುಹಿಸುವ ಸಲುವಾಗಿ ಜಿಲ್ಲಾ ಮತ್ತು ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಸಂಘಟಿಸಬೇಕಾಗಿದ್ದು, ಅದರಂತೆ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ.

ರಾಜ್ಯ ಮಟ್ಟದಲ್ಲಿ ಭಾಗವಹಿಸಿ ವಿಜೇತರಾದವರು ರಾಷ್ಟç ಮಟ್ಟದ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುತ್ತಾರೆ.

ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದ ಸ್ಪರ್ಧೆಗಳಲ್ಲಿ ಸಾಂಸ್ಕೃತಿಕ ವಿಭಾಗದಲ್ಲಿ ಜನಪದ ನೃತ್ಯ (ತಂಡ), ಜನಪದ ಗೀತೆ (ತಂಡ) ಪ್ರಾದೇಶಿಕ ಭಾಷೆ, ಕಥೆ ಬರೆಯುವುದು (Story Writing) (1000 ಪದಗಳಿಗೆ ಮೀರದಂತೆ, ಹಿಂದಿ, ಆಂಗ್ಲ, ಪ್ರಾದೇಶಿಕ ಭಾಷೆಯಲ್ಲಿ), ಚಿತ್ರಕಲೆ, ಘೋಷಣೆ(ಹಿಂದಿ ಮತ್ತು ಆಂಗ್ಲ ಭಾಷೆಯಲ್ಲಿ ಇರಬೇಕು.

ಸ್ಪರ್ಧಿಗಳು ಸಿದ್ದಪಡಿಸಿಕೊಂಡಿರುವ ಆಯ್ದ ವಿಷಯಗಳ ಬಗ್ಗೆ 7 ನಿಮಿಷಗಳ ಭಾಷಣ ಮಾಡಬೇಕು), ಕವಿತೆ ಬರೆಯುವುದು (ವೈಯಕ್ತಿಕ: ಹಿಂದಿ, ಆಂಗ್ಲ, ಪ್ರಾದೇಶಿಕ ಭಾಷೆಯಲ್ಲಿ) ಹಾಗೂ Innovation Track ವಿಭಾಗದಲ್ಲಿ Exhibition of Science Mela ರಾಜ್ಯ ಮಟ್ಟದವರೆಗೆ ಮಾತ್ರ ಆಯೋಜಿಸಲಾಗುವುದು.

ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಚಿಸುವ ಸ್ಪರ್ಧಾಳುಗಳು ಆಧಾರ್ ಕಾರ್ಡ್ ಝರಾಕ್ಸ್ ಪ್ರತಿ, ಬ್ಯಾಂಕ್ ಪಾಸಬುಕ್ ಪ್ರತಿ, 2-ಭಾವಚಿತ್ರದೊಂದಿಗೆ ಕಾರ್ಯಕ್ರಮ ದಿನದಂದು ಬೆಳಿಗ್ಗೆ 9 ಗಂಟೆಯೊಳಗಾಗಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು.

ದೂರವಾಣಿ ಮುಖಾಂತರ ನೋಂದಣಿಗಾಗಿ ಬಿ.ಕೀರ್ತಿವರ್ಧನ ದ್ವಿ.ದ.ಸ-7676343554, ತುಕಾರಾಮ, ಕಛೇರಿ ಸಿಬ್ಬಂದಿ-8197398600 ಇವರನ್ನು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಿಲ್ಲಾ ಕ್ರೀಡಾಂಗಣ, ಗದಗ ರಸ್ತೆ, ಕೊಪ್ಪಳ ಕಛೇರಿಯ ದೂರವಾಣಿ ಸಂಖ್ಯೆ: 08539-230121 ಗೆ ಕಛೇರಿ ಅವಧಿಯಲ್ಲಿ ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande