ಲಿಂಗಸೂಗೂರು, 12 ಅಕ್ಟೋಬರ್ (ಹಿ.ಸ.)
ಆ್ಯಂಕರ್ : ದೇವದುರ್ಗ ಶಾಸಕಿ, ಜೆಡಿಎಸ್‍ನ ಲೀಡರ್ ಅವರ ಕಾರು ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯ ಚಾಲನೆಯ ಕಾರಣ ಗುರುಗುಂಟಾ ಗ್ರಾಮದ ಬಳಿ ಅಪಘಾತಕ್ಕೀಡಾಗಿದ್ದು ಶಾಸಕರ ತಲೆಗೆ ಪೆಟ್ಟಾಗಿದ್ದು, ಪ್ರಾಣಾಪಯಾದಿಂದ ಪಾರಾಗಿದ್ದಾರೆ.
ಲಿಂಗಸೂಗೂರಿನ ವ್ಯಾಪ್ತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ಈ ದುರ್ಘಟನೆ ನಡೆದಿದ್ದು, ಶಾಸಕರು ದೇವದುರ್ಗದಿಂದ ರಾಯಚೂರು ಪಟ್ಟಣಕ್ಕೆ ಬರುತ್ತಿದ್ದಾಗ ಮತ್ತೊಂದು ವಾಹನವನ್ನು ಓವರ್ ಟೇಕ್ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡಿರುವ ಶಾಸಕರನ್ನು ತಕ್ಷಣವೇ ಲಿಂಗಸೂಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಪ್ರಾಣಾಪಾಯವಿಲ್ಲ. ಕಾರಿನ ಮುಂಭಾಗವು ಸಂಪೂರ್ಣ ಹಾಳಾಗಿದೆ. ಕಾರಿನ ಚಾಲಕನಿಗೂ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆದಿದೆ.
ಶಾಸಕಿ ಕರೆಮ್ಮ ಅವರ ಅಭಿಮಾನಿಗಳು ಮತ್ತು ಆಪ್ತರು ಆಸ್ಪತ್ರೆಗೆ ದೌಡಾಯಿಸಿದ್ದು, ಆಸ್ಪತ್ರೆಯ ಮುಂಭಾಗದಲ್ಲಿ ಜನಜಂಗುಳಿ ಸೇರಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್