ಬೆಂಗಳೂರು, 12 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೆಂಗಳೂರು ನಡಿಗೆ ಕಾರ್ಯಕ್ರಮದ ವೇಳೆ ಮತ್ತಿಕೆರೆಯ ಜೆಪಿ ಪಾರ್ಕ್‌ನಲ್ಲಿ ಶಾಸಕ ಮುನಿರತ್ನ ವರ್ತನೆಗೆ ಪ್ರತಿಕ್ರಿಯಿಸಿರುವ ಶಿವಕುಮಾರ್
ಸ್ಥಳೀಯ ಶಾಸಕರಿಗೆ ತಾಳ್ಮೆ ಇಲ್ಲ, ಕಾರ್ಯಕ್ರಮ ಹಾಳು ಮಾಡಲು ಆಗಮಿಸಿದ್ದರು. ಇಂತವರನ್ನು ಗೆಲ್ಲಿಸಿದ್ದು ಕ್ಷೇತ್ರದ ಜನತೆ ತಪ್ಪು ಮುಂದೆಯಾದರೂ ಸರಿಪಡಿಸಿಕೊಳ್ಳಿ ಎಂದಿದ್ದಾರೆ.
ಜೆಪಿ ಪಾರ್ಕ್‌ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದು ಯಾವುದೇ ಶಿಲಾನ್ಯಾಸ ಮಾಡುವ ಕಾರ್ಯಕ್ರಮ ಅಲ್ಲ. ಇದು ಜನರ ಸಮಸ್ಯೆ ಆಲಿಸುವ ಕಾರ್ಯಕ್ರಮ. ಎಲ್ಲರಿಗೂ ಏನು ಗೌರವ ಕೊಡಬೇಕು ಅದು ಕೊಟ್ಟಿದ್ದೇವೆ ಎಂದು ಹೇಳಿದರು.
ಆರ್.ಎಸ್.ಎಸ್ ಸಂಸ್ಥೆಗೆ ಅಗೌರವ ತರುವ ಕೆಲಸ ಮುನಿರತ್ನ ಮಾಡಿದ್ದಾರೆ. ಆರ್.ಎಸ್.ಎಸ್.ಗೆ ಒಂದು ಇತಿಹಾಸ ಇದೆ ಅವರೇನು ಮಾಡಬೇಕು ಮಾಡುತ್ತಿದ್ದಾರೆ. ಅವರ ಹೆಸರನ್ನು ಕೆಡಿಸುವ ಕೆಲಸ ಇಲ್ಲಿ ನಡೆಯುತ್ತಿದೆ ಎಂದ ಅವರು ಜಿಬಿಎ ಸಭೆಗೆ ಆಗಮಿಸಿ ಸಮಸ್ಯೆ ಹೇಳದೆ ಇಲ್ಲಿ ಬಂದು ಈ ರೀತಿ ವರ್ತನೆ ಮಾಡುತ್ತಿದ್ದಾರೆ ಎಂದು ಮುನಿರತ್ನ ವಿರುದ್ದ ಹರಿಹಾಯ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa