ಬೆಂಗಳೂರಿನಲ್ಲಿ ಡಿಕೆಶಿ ಎದುರು ಶಾಸಕ ಮುನಿರತ್ನ ರಂಪಾಟ
ಬೆಂಗಳೂರು, 12 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೆಂಗಳೂರು ನಡಿಗೆ ಕಾರ್ಯಕ್ರಮದ ವೇಳೆ ಭಾನುವಾರ ಮತ್ತಿಕೆರೆಯ ಜೆಪಿ ಪಾರ್ಕ್‌ನಲ್ಲಿ ರಾಜಕೀಯ ರಂಪಾಟ ನಡೆಯಿತು. ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಜೆಪಿ ಪಾರ್ಕನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮ
Dks


ಬೆಂಗಳೂರು, 12 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೆಂಗಳೂರು ನಡಿಗೆ ಕಾರ್ಯಕ್ರಮದ ವೇಳೆ ಭಾನುವಾರ ಮತ್ತಿಕೆರೆಯ ಜೆಪಿ ಪಾರ್ಕ್‌ನಲ್ಲಿ ರಾಜಕೀಯ ರಂಪಾಟ ನಡೆಯಿತು.

ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಜೆಪಿ ಪಾರ್ಕನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಾರ್ವಜನಿಕರ ಜೊತೆ ಸಂವಾದ ನಡೆಸುತ್ತಿದ್ದ ವೇಳೆ ಗಣವೇಶದಲ್ಲಿ ಆಗಮಿಸಿದ ಬಿಜೆಪಿ ಶಾಸಕ ಮುನಿರತ್ನ ಸ್ಥಳೀಯ ಶಾಸಕನಾದ ನನಗೆ ಆಹ್ವಾನ ನೀಡದೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿ ಇದು ಸರ್ಕಾರಿ ಕಾರ್ಯಕ್ರಮವಲ್ಲ, ಕಾಂಗ್ರೆಸ್ ಕಾರ್ಯಕ್ರಮ ಎಂದು ಆಕ್ರೋಶ ಹೊರಹಾಕಿದರು.

ಈ ವೇಳೆ ಶಾಸಕ ಮುನಿರತ್ನ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ, ತಳ್ಳಾಟ ನಡೆಯಿತು.

ನಂತರ ಮಾತನಾಡಿದ ಮುನಿರತ್ನ ನನ್ನ ಮೇಲೆ ಡಿ.ಕೆ. ಶಿವಕುಮಾರ್ ಬೆಂಬಲಿಗರು, ಆರ್‌ಎಸ್‌ಎಸ್‌ ಟೋಪಿ ಕಿತ್ತು ಹಲ್ಲೆ ನಡೆಸಿದ್ದಾರೆ. ಕನಕಪುರ, ರಾಮನಗರದಿಂದ ರೌಡಿಗಳನ್ನು ಕರೆಸಿದ್ದಾರೆ. ಪೊಲೀಸರು ಇರದಿದ್ದರೆ ನನ್ನನ್ನೇ ಕೊಲ್ಲುತ್ತಿದ್ದರು ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande