ಮಂಡ್ಯ, 12 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಮಂಡ್ಯ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಮಂಡ್ಯ ನಗರದ ಕೆ.ಎಚ್.ಬಿ ಕಾಲೋನಿ ಹಾಗೂ ಶ್ರೀರಂಗಪಟ್ಟಣ ತಾಲೂಕಿನ ದರಸಗುಪ್ಪೆ ಮತ್ತು ಕೂಡಲಕುಪ್ಪೆ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಅಗತ್ಯವಿರುವೆಡೆ ತಡೆಗೋಡೆ ನಿರ್ಮಾಣ ಹಾಗೂ ಸೇತುವೆ ನಿರ್ಮಾಣ, ಸಿಡಿಎಸ್ ನಾಲೆಯ ದುರಸ್ತಿ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳುವುದು. ಹಾಗೂ ಬೆಳೆ ಹಾನಿಗೆ ಪರಿಹಾರ ಕಲ್ಪಿಸಲು ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa