ಚಿತ್ರದುರ್ಗ, 12 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿರುವ ಅನುಪಯುಕ್ತ ಸಾಮಗ್ರಿಗಳನ್ನು ಇದೇ ಅ.18ರಂದು ಬಹಿರಂಗ ಹರಾಜು ಪ್ರಕ್ರಿಯೆ ನಡೆಸಲಾಗುವುದು.
ಜಿಎಸ್‍ಟಿ ರಿಜಿಸ್ಟ್ರೇಶನ್ ಹೊಂದಿರುವ ಆಸಕ್ತಿಯುಳ್ಳ ಹರಾಜುದಾರರು ಬಹಿರಂಗ ಹರಾಜಿನಲ್ಲಿ ಭಾಗವಹಿಸಲು ನಗದು ರೂಪದಲ್ಲಿ ರೂ.5000/- ಭದ್ರತಾ ಠೇವಣಿಯೊಂದಿಗೆ (ಇಎಂಡಿ ಮೊತ್ತ) ಕಚೇರಿಗೆ ಸಲ್ಲಿಸಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8746842606 ಗೆ ಸಂಪರ್ಕಿಸಬಹುದು ಎಂದು ಪರಶುರಾಂಪುರ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರದ ಪ್ರಾಚಾರ್ಯರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa