ಬೆಂಗಳೂರು, 12 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬೆಂಗಳೂರು ಸೇರಿದಂತೆ ರಾಜ್ಯದ 14 ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಹಳದಿ ಎಚ್ಚರಿಕೆ ನೀಡಿದೆ.
ಅಕ್ಟೋಬರ್ 13ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು. ರಾಜ್ಯದ ಕೆಲವೆಡೆ ಭೂ ಕುಸಿತದ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರಿನಲ್ಲಿ ನಿನ್ನೆ ಸುರಿದ ಮಳೆಗೆ ಅನೇಕ ಪ್ರದೇಶಗಳು ಜಲಾವೃತವಾಗಿವೆ. ಇಂದು ಕೂಡ ಬೆಂಗಳೂರಿನಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa